ಪುಲ್ವಾಮಾ ದಾಳಿ: ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಘೋಷಿಸಿದ ತೆಲಂಗಾಣ ಸಿಎಂ

ಹೈದರಾಬಾದ್​: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್​ಪಿಎಫ್​ ಯೋಧರ ಕುಟುಂಬಸ್ಥರಿಗೆ ತಲಾ 25 ಲಕ್ಷ ರೂ. ಆರ್ಥಿಕ ನೆರವು ನೀಡುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್​ ರಾವ್​ ಘೋಷಿಸಿದ್ದಾರೆ.

ಇಂದು ತೆಲಂಗಾಣ ವಿಧಾನಸಭೆ ಮತ್ತು ವಿಧಾನ ಪರಿಷತ್​ನಲ್ಲಿ ಪುಲ್ವಾಮಾ ದಾಳಿಯನ್ನು ಖಂಡಿಸಿ ನಿರ್ಣಯವನ್ನು ಅಂಗೀಕರಿಸಲಾಯಿತು. ದಾಳಿಯಲ್ಲಿ ಹುತಾತ್ಮರಾದ ಯೋಧರ ಗೌರವಾರ್ಥ 2 ನಿಮಿಷ ಮೌನ ಆಚರಿಸಲಾಯಿತು. ಆ ನಂತರ ಮಾತನಾಡಿದ ಕೆಸಿಆರ್​ ಯೋಧರ ಕುಟುಂಬಸ್ಥರಿಗೆ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದರು.

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರ ಕುಟುಂಬಸ್ಥರಿಗೆ ದೇಶದ ಎಲ್ಲೆಡೆಯಿಂದ ನೆರವು ಹರಿದು ಬರುತ್ತಿದೆ. (ಏಜೆನ್ಸೀಸ್​)