ತೆಲಂಗಾಣ: ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಕೆಸಿಆರ್!

ವಿಜಯವಾಣಿ (3)
Published on

ತೆಲಂಗಾಣ: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಗುರುವಾರ (ಡಿ.07) ತಮ್ಮ ಎರವಳ್ಳಿ ಎಸ್ಟೇಟ್​​ನಲ್ಲಿ ಕಾಲು ಜಾರಿ ಬಿದ್ದಿದ್ದು, ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದರಾಬಾದ್‌ನ ಯಶೋದಾ ಆಸ್ಪತ್ರೆಯಲ್ಲಿ ಅಡ್ಮಿಟ್​ ಮಾಡಿದ್ದು, ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ವಿವರಗಳಿಗೆ ನಿರೀಕ್ಷಿಸಲಾಗಿದೆ.

ತೆಲಂಗಾಣದಲ್ಲಿ ಇತ್ತೀಚೆಗೆ ಅಂತ್ಯಗೊಂಡ ವಿಧಾನಸಭಾ ಚುನಾವಣೆಯಲ್ಲಿ, ಕೆ. ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಹ್ಯಾಟ್ರಿಕ್ ಸಾಧಿಸುವ ಭರವಸೆ ಹೊಂದಿತ್ತು, ಆದ್ರೆ, ಕಾಂಗ್ರೆಸ್‌ ಗೆಲುವಿನ ಮುಖೇನ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ವಿಫಲಗೊಂಡಿತು. ಕಾಂಗ್ರೆಸ್ ಉಸ್ತುವಾರಿಯನ್ನು ಮುನ್ನಡೆಸಿದ್ದ ಕಸಭಾ ಸಂಸದ ರೇವಂತ್ ರೆಡ್ಡಿ, 119 ಸದಸ್ಯ ಬಲದ ಸದನದಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ತೆಲಂಗಾಣದ ನೂತನ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು.

ರೇವಂತ್​ ರೆಡ್ಡಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕಾಂಗ್ರೆಸ್​ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಉಪಸ್ಥಿತರಿದ್ದರು,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net