More

    ಅಕ್ಬರುದ್ದೀನ್ ಓವೈಸಿ ತೆಲಂಗಾಣ ಹಂಗಾಮಿ ಸ್ಪೀಕರ್‌ : ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧನೆ

    ಹೈದರಾಬಾದ್:‌ ತೆಲಂಗಾಣ ವಿಧಾನಸಭೆಯ ಹಂಗಾಮಿ ಸಭಾಧ್ಯಕ್ಷರಾಗಿ ಎಐಎಂಐಎಂ ಶಾಸಕ ಅಕ್ಬರುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಇದನ್ನೂ ಓದಿ: ಒಂದೇ ಮಂಟಪದಲ್ಲಿ ನಾಲ್ವರನ್ನು ಮದುವೆಯಾದ ವರ; ‘ಅದೃಷ್ಟ ಅಂದ್ರೆ ನಿಂದು ಗುರು’ ಎಂದ್ರು ನೆಟ್ಟಿಗರು

    ರಾಜ್ಯದಲ್ಲಿ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ ಶನಿವಾರ ಆರಂಭವಾಗಿರುವ ವಿಧಾನಸಭೆಯ ಮೊದಲ ಅಧಿವೇಶನಕ್ಕೆ ಹಂಗಾಮಿ ಸ್ಪೀಕರ್‌ ಆಗಿ ಅಕ್ಬರುದ್ದೀನ್ ಓವೈಸಿ ಅವರನ್ನು ನೇಮಕ ಮಾಡಲಾಗಿದ್ದು, ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಪ್ರಮಾಣ ವಚನ ಬೋಧಿಸಿದರು.

    ಸಂವಿಧಾನದ 180ನೇ ವಿಧಿಯ ಷರತ್ತು (1) ರ ಪ್ರಕಾರ ಅಧಿಕಾರ ಚಲಾಯಿಸಿ ರಾಜ್ಯಪಾಲರು ಅಕ್ಬರುದ್ದೀನ್ ಓವೈಸಿ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿದ್ದಾರೆ. ಚುನಾಯಿತ ಸದಸ್ಯರಲ್ಲಿ ಒಬ್ಬರನ್ನು ಸ್ಪೀಕರ್‌ ಆಗಿ‌ ನೇಮಿಸುವವರೆಗೆ ಅಕ್ಬರುದ್ದೀನ್‌ ಸ್ಪೀಕರ್‌ ಆಗಿ ಅಧಿವೇಶನ ನಿರ್ವಹಿಸಲಿದ್ದಾರೆ.

    ಇತ್ತೀಚೆಗಷ್ಟೇ ನಡೆದ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ ಕಾಂಗ್ರೆಸ್‌ 64 ಸ್ಥಾನ ಗೆಲ್ಲುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ(ಬಿಆರ್​ಎಸ್​) 39 ಹಾಗೂ ಬಿಜೆಪಿ 8 ಸ್ಥಾನಗಳನ್ನು ಪಡೆದುಕೊಂಡಿದ್ದು, ವಿರೋಧ ಪಕ್ಷದ ಸ್ಥಾನದಲ್ಲಿ ಕುಳಿತುಕೊಳ್ಳಲಿವೆ.
    ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) ಅಧ್ಯಕ್ಷರಾಗಿದ್ದ ರೇವಂತ್ ರೆಡ್ಡಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ಸಚಿವ ಜಮೀರ್ ಮೇಲ್ಮನವಿ ಸುಪ್ರೀಂಕೋರ್ಟ್ ನಿರಾಕರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts