More

    ತೃತೀಯಲಿಂಗಿಯನ್ನು ಪ್ರೀತಿಸಿ ಮದುವೆಯಾದ ಯುವಕ; ರಕ್ಷಣೆಗಾಗಿ ಪೊಲೀಸರ ಮೊರೆ ಹೋದ..!

    ಹೈದ್ರಾಬಾದ್​​: ಸಲಿಂಗ ವಿವಾಹಗಳನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ನ್ಯಾಯಾಲಯದ ತೀರ್ಪಿನ ನಂತರ, ಸಲಿಂಗ ವಿವಾಹಕ್ಕೆ ಯಾವುದೇ ಕಾನೂನು ಮಾನ್ಯತೆ ಇರುವುದಿಲ್ಲ. ಈ ನಡುವೆ ತೆಲಂಗಾಣದಲ್ಲಿ ವಿಶೇಷ ಘಟನೆಯೊಂದು ಬೆಳಕಿಗೆ ಬಂದಿದೆ.

    ಹುಡುಗನೊಬ್ಬ ತೃತೀಯಲಿಂಗಿಯೊಬ್ಬಳನ್ನು ಪ್ರೀತಿಸಿ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು. ಆದರೆ ಇದೀಗ ಈ ಜೋಡಿ ಪೊಲೀಸರಿಂದ ರಕ್ಷಣೆ ಕೋರಿದ್ದಾರೆ.

    ತೆಲಂಗಾಣದ ಖಮ್ಮಂನ ಗಣೇಶ್ ಎಂಬ ವ್ಯಕ್ತಿ ಆಂಧ್ರಪ್ರದೇಶದ ನಂದಿಗಾಮಾ ಮೂಲದ ನಿವಾಸಿಯಾಗಿರುವ ದೀಪು ಮದುವೆಯಾಗಿದ್ದಾರೆ. ಈ ಜೋಡಿ ಒಂದು ವರ್ಷದ ಹಿಂದೆ ಪ್ರೀತಿಸುತ್ತಿತ್ತು. ಹೈದರಾಬಾದ್‌ನಲ್ಲಿ ಆಗಾಗ್ಗೆ ಭೇಟಿಯಾಗಲು ಪ್ರಾರಂಭಿಸಿದರು. ತದನಂತರ ಇಬ್ಬರೂ ಮದುವೆಯಾಗಲು ನಿರ್ಧರಿಸಿದರು. ಆದರೆ ಈ ಮದುವೆಗೆ ಇಬ್ಬರ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಗಣೇಶ್ ಮತ್ತು ದೀಪು ಇತ್ತೀಚೆಗೆ ಭದ್ರತೆ ಕೋರಿ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಈ ಮದುವೆಗೆ ಇಬ್ಬರ ಮನೆಯವರು ವಿರೋಧ ವ್ಯಕ್ತಪಡಿಸಿದ್ದಾರೆ. ತಮ್ಮ ಜೀವಕ್ಕೆ ಅಪಾಯವಿದೆ ರಕ್ಷಿಸಬೇಕೆಂದು ಪೊಲೀಸರ ಮೊರೆ ಹೋಗಿದ್ದಾರೆ. ಈ ನಡುವೆ ಇವರಿಬ್ಬರ ಪ್ರೇಮ ವಿವಾಹದ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಇಂತಹ ವಿವಾಹಗಳ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ಸಲಿಂಗ ವಿವಾಹಗಳಿಗೆ ಸಾಂವಿಧಾನಿಕ ಸಿಂಧುತ್ವವನ್ನು ನೀಡುವುದರ ವಿರುದ್ಧ 3:2 ತೀರ್ಪು ನೀಡಿದೆ. ಈ ಬಗ್ಗೆ ಕಾನೂನು ರೂಪಿಸುವುದು ಸಂಸತ್ತಿಗೆ ಬಿಟ್ಟದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts