ರ‍್ಯಾಗಿಂಗ್​ಗೆ ವೈದ್ಯಕೀಯ ವಿದ್ಯಾರ್ಥಿನಿ ಬಲಿ: ವಾಟ್ಸ್​ಆ್ಯಪ್​ ಚಾಟ್​ನಿಂದ ಸಿಕ್ಕಿಬಿದ್ದ ಸೀನಿಯರ್​ ಸ್ಟೂಡೆಂಟ್​

ಹೈದರಾಬಾದ್​: ಆತ್ಮಹತ್ಯೆಗೆ ಯತ್ನಿಸಿದ ನಾಲ್ಕು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿನಿ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ. 26 ವರ್ಷದ ಪ್ರೀತಿ ಕಾಕತೀಯ ಮೆಡಿಕಲ್​ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಹಿರಿಯ ವಿದ್ಯಾರ್ಥಿಗಳ ಕುಚೇಷ್ಟೆಯಿಂದ ಮನನೊಂದಿದ್ದ ಪ್ರೀತಿ ಕಳೆದ ಬುಧವಾರ ಆತ್ಮಹತ್ಯೆಗೆ ಯತ್ನಿಸಿದ್ದಳು. ಅಸ್ವಸ್ಥಳಾಗಿದ್ದ ಆಕೆಯನ್ನು ಆರಂಭದಲ್ಲಿ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್​ಗೆ ಸ್ಥಳಾಂತರ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಭಾನುವಾರ ಕೊನೆಯುಸಿರೆಳೆದಿದ್ದಾಳೆ. ಇದನ್ನೂ … Continue reading ರ‍್ಯಾಗಿಂಗ್​ಗೆ ವೈದ್ಯಕೀಯ ವಿದ್ಯಾರ್ಥಿನಿ ಬಲಿ: ವಾಟ್ಸ್​ಆ್ಯಪ್​ ಚಾಟ್​ನಿಂದ ಸಿಕ್ಕಿಬಿದ್ದ ಸೀನಿಯರ್​ ಸ್ಟೂಡೆಂಟ್​