ಹೈದರಾಬಾದ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ತೆಲಂಗಾಣದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಪ್ರತಿ ಜಿಲ್ಲಾಧಿಕಾರಿಗಳ ಕಚೇರಿ, ಹೈದರಾಬಾದ್ ಮುನ್ಸಿಪ್ ಕಾರ್ಪೊರೇಷನ್(ಜಿಎಚ್ಎಂಸಿ) ಮತ್ತು ರಾಜ್ಯ ಕಾರ್ಯದರ್ಶಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಸರ್ಕಾರ ಸೂಚನೆ ನೀಡಿದೆ.
ಇದನ್ನು ಓದಿ: ಸೈಬರ್ ಹಗರಣದಲ್ಲಿ ಸಿಲುಕಿದ್ದ 47 ಭಾರತೀಯರ ರಕ್ಷಣೆ; ಎಚ್ಚರದಿಂದಿರುವಂತೆ ರಾಯಭಾರಿ ಕಚೇರಿ ಸೂಚನೆ
ಸೈಕ್ಲೋನ್ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರಾಜ್ಯದ 9 ಜೆಲ್ಲಗಳಲ್ಲಿ ರೆಡ್ ಅಲರ್ಟ್, ಹದಿಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಹನ್ನೊಂದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಲ್ಲದೆ ಕರಾವಳಿಯಲ್ಲಿರುವವರು ಜಾಗೂರಕರಾಗಿರುವಂತೆ ಸೂಚಿಸಿದೆ. ಪ್ರಸ್ತುತ ಹೈದರಾಬಾದ್ ಮತ್ತು ವಿಜಯವಾಡದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ತಂಡಗಳು ಬೀಡುಬಿಟ್ಟಿವೆ. ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣದಿಂದಲೇ ತಮ್ಮ ಕಾರ್ಯವನ್ನು ಆರಂಭಿಸುತ್ತಾರೆ. ನಗರದಲ್ಲಿ ಅತಿ ಹೆಚ್ಚು ಮಳೆಯಾಗುವ ಸಂಭವವಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಹೈದರಾಬಾದ್‌ನ ಎಲ್ಲಾ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಟ್ಯಾಂಕ್ ಕಲುಷಿತವಾಗಿ ರೋಗ ಹರಡುವಿಕೆಯನ್ನು ತಪ್ಪಿಸಲು ಕ್ಲೋರಿನೇಷನ್ ಮಾಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಸಲಹೆ ನೀಡಿದೆ. ಭಾರೀ ಮಳೆಯಿಂದಾಗಿ ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿತವಾದರೆ ಹಾಗೂ ಜೀವ ಮತ್ತು ಆಸ್ತಿಪಾಸ್ತಿ ನಷ್ಟವನ್ನು ತಡೆಗಟ್ಟುವ ಕ್ರಮಗಳನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ.
ಕಂದಾಯ, ಪೌರಾಡಳಿತ, ವಿದ್ಯುತ್, ಆರೋಗ್ಯ ಇಲಾಖೆಗಳ ಅಧಿಕಾರಿಗಳು ಕಟ್ಟೆಚ್ಚರ ವಹಿಸುವಂತೆ ಸೂಚಿಸಿರುವ ಮುಖ್ಯಮಂತ್ರಿಗಳು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ತಗ್ಗು ಪ್ರದೇಶದಲ್ಲಿರುವ ಜನರನ್ನು ಕೂಡಲೇ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಶಾಂತಿಕುಮಾರಿ ಹೇಳಿದ್ದಾರೆ. ಜಲಾಶಯಗಳ ಗೇಟ್‌ಗಳನ್ನು ಓಪನ್ ಮಾಡುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.(ಏಜೆನ್ಸೀಸ್)
ಅ.5ಕ್ಕೆ ಹರಿಯಾಣ ವಿಧಾನಸಭಾ ಚುನಾವಣೆ ಮತದಾನ ಮುಂದೂಡಿಕೆ; ಚುನಾವಣಾ ಆಯೋಗ ಕೊಟ್ಟ ಕಾರಣ ಹೀಗಿದೆ…