More

    ಭಾರೀ ಮಳೆ, ಹಲವು ಪ್ರದೇಶಗಳು ಜಲಾವೃತ: ಈ ರಾಜ್ಯದಲ್ಲಿ 3 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಹೈದರಾಬಾದ್: ದೇಶಾದ್ಯಂತ ವರುಣನ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾ ಅನಾಹುತಗಳು ಸೃಷ್ಟಿಯಾಗಿದ್ದು, ಜನ-ಜೀವನ ಹೇಳತೀರದು.ಕೆಲವೆಡೆ ಶಾಲೆ-ಕಚೇರಿಗಳಿಗೂ ಹೋಗದ ಪರಿಸ್ಥಿತಿ ಎದುರಾಗಿದೆ.

    ಭಾರೀ ಮಳೆಯಿಂದಾಗಿ ತೆಲಂಗಾಣ ಸರ್ಕಾರ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕೆ.ಚಂದ್ರಶೇಖರ್​ ರಾವ್​ ತಿಳಿಸಿದ್ದಾರೆ.

    ಈ ಬಗ್ಗೆ ಸಚಿವ ಸಂಪುಟ ನಡೆಸಿದ ಮುಖ್ಯಮಂತ್ರಿ ಶಾಲೆಗಳಿಗೆ ರಜೆ ಘೋಷಿಸಲು ಸೂಚನೆ ನೀಡಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ತುರ್ತು ಪರಿಹಾರ ನೀಡಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಮಳೆ ಅವಾಂತರದಿಂದ ಸೃಷ್ಟಿಯಾಗಿರುವ ಸಮಸ್ಯೆ ಕುರಿತು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್​ ನಡೆಸಿದ ಸಿಎಂ, ಅಗತ್ಯ ಕ್ರಮ ಕೈಗೊಳ್ಳಲು ಹೇಳಿದ್ದಾರೆ.

    ಜಯಶಂಕರ್​ಭೂಪಲಪಲ್ಲಿ, ಮಂಚೇರಿಯಲ್​,ನಿರ್ಮಲ್​, ನಿಜಾಮಾಬಾದ್​,ಪೆದ್ದಪಲ್ಲಿಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (ಏಜೆನ್ಸೀಸ್​)

    ಶೀಘ್ರದಲ್ಲೇ ಕೊನೆಯಾಗಲಿದೆ ವರ್ಕ್​​ ಫ್ರಂ ಹೋಮ್​: ಈ ಬಗ್ಗೆ ಟಿಸಿಎಸ್​ ಸಿಇಒ ಗೋಪಿನಾಥನ್​ ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts