ಕಾರ್ಗಲ್: ಸಂಕ್ರಾಂತಿ ಹಬ್ಬದ ಪ್ರಯುಕ್ತ ಲಿಂಗನಮಕ್ಕಿಯ ನಮ್ಮನೆ ಗ್ರಾಮೀಣ ಹೆಣ್ಣುಮಕ್ಕಳ ವಸತಿ ನಿಲಯದಲ್ಲಿ ಸಂಕ್ರಾಂತಿ ಸುಗ್ಗಿ ಹಾಗೂ ರೈತ ನಮನ ಕಾರ್ಯಕ್ರಮ ಆಚರಿಸಲಾಯಿತು.
ಭಾನುಕುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಗ್ರಾಮದ ಕಡಕೋಡಿನ ಪಾರಂಪರಿಕ ಕೃಷಿಕ ಜಯೇಂದ್ರ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಈ ಭಾಗದ 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು. ಸಂಕ್ರಾಂತಿ ಹಬ್ಬದ ವಿಶೇಷ ಪೊಂಗಲ್ ತಯಾರಿಸಿ ಭೋಜನ ಮಾಡಿದರು.
ರೈತರು ಬೆಳೆದ ಮೊದಲ ಫಸಲಿನ ರಾಶಿ ಮಾಡಿ ಸುಗ್ಗಿ ಮಾಡುವ ಸಂಪ್ರದಾಯ ಉಳಿಯಬೇಕು ಹಾಗೂ ನಮ್ಮ ದೇಶದ ಪಾರಂಪರಿಕ ಹಬ್ಬಗಳ ಮಹತ್ವ ಮಕ್ಕಳಿಗೆ ತಿಳಿಸಬೇಕು ಎನ್ನುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಸತಿ ನಿಲಯದ ಸಂಸ್ಥಾಪಕ ಸಂತೋಷ್ ಲಿಂಗನಮಕ್ಕಿ ತಿಳಿಸಿದರು.
ಕಂಚಿಕೈ ಶನೈಶ್ಚರ ದೇವಾಲಯ ಧರ್ಮದರ್ಶಿ ಪುಟ್ಟಪ್ಪ, ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ಕೇಂದ್ರ ಸಮಿತಿ ಅಧ್ಯಕ್ಷ ಕೆ.ವೀರೇಂದ್ರ, ಉಪಾಧ್ಯಕ್ಷ ಕೇಶವೇಗೌಡ, ಉದಯಕುಮಾರ್ ಪಂಡಿತ್, ಗ್ರಾಮಸ್ಥ ಬಾಬಣ್ಣ, ಎಸ್‌ಡಿಎಂಸಿ ಅಧ್ಯಕ್ಷ ವೈ.ಜಿ.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ ಬಣ್ಣುಮನೆ, ವಸತಿ ನಿಲಯದ ಸಿಬ್ಬಂದಿ ಇದ್ದರು.
ಮಕ್ಕಳಿಗೆ ಹಬ್ಬಗಳ ಮಹತ್ವ ತಿಳಿಸಿ

You Might Also Like
ಸಂಬಳ ಸಾಲ್ತಿಲ್ಲ! ಸಾಲ ತೀರಿಸಲು ಚಿನ್ನದ ಸಾಲ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳನ್ನು ಮಾತ್ರ ಮಾಡಬೇಡಿ | Gold Loan
Gold Loan: ಸಂಸ್ಥೆ ಕೊಡುತ್ತಿರುವ ಸಂಬಳ ನಮಗೆ ಮಾತ್ರವಲ್ಲ, ನಮ್ಮ ಸಾಲ ತೀರಿಸಲು ಸಹ ಸಾಲುತ್ತಿಲ್ಲ…
ಭಾರತದಲ್ಲಿ ಅನಾರೋಗ್ಯಕರ ಆಹಾರ ಸೇವನೆಯೇ ಹೆಚ್ಚು: ಶೇ. 56 ರೋಗಗಳಿಗೆ ಕೆಟ್ಟ ಆಹಾರ ಪದ್ಧತಿ ಕಾರಣವೆಂದ ಏಮ್ಸ್! Indians Food
Indians Food : ಭಾರತದಲ್ಲಿ ಬೊಜ್ಜು ಅಥವಾ ಸ್ಥೂಲಕಾಯತೆ ಇಂದು ಸಾಮಾನ್ಯ ಹಾಗೂ ಸಂಕೀರ್ಣ ಕಾಯಿಲೆಗಳಲ್ಲಿ…
ನೀವು ಚಿಕನ್ ಅಥವಾ ಮಟನ್ ಲಿವರ್ ತಿಂತಿರಾ? ಹಾಗಾದ್ರೆ ಎಚ್ಚರ! ಈ ವಿಚಾರ ನಿಮಗೆ ಗೊತ್ತಿರಲೇಬೇಕು… Liver
Liver : ಮಾಂಸಾಹಾರ ಬಹುತೇಕರ ಪ್ರಿಯವಾದ ಆಹಾರ. ಬೇರೆ ಯಾವುದನ್ನು ಬೇಕಾದರೂ ಬಿಡುತ್ತೇನೆ ಆದರೆ, ಒಂದು…