ಗುರು ಪರಂಪರೆ ಮಹತ್ವ ಮಕ್ಕಳಿಗೆ ತಿಳಿಸಿ

samanvya

ಶಿವಮೊಗ್ಗ: ಆಧ್ಯಾತ್ಮಿಕ ಚಿಂತನೆ ಹಾಗೂ ಗುರು ಪರಂಪರೆ ಮಹತ್ವವನ್ನು ಮಕ್ಕಳಿಗೆ ಮನೆಗಳಲ್ಲಿ ತಿಳಿಸುವ ಅವಶ್ಯಕತೆ ಇದೆ ಎಂದು ಮೈಸೂರಿನ ಅರ್ಜುನ ಅವಧೂತ ಮಹಾರಾಜರು ಹೇಳಿದರು.

ಗುರುಪೂರ್ಣಿಮೆ ಅಂಗವಾಗಿ ಆರ್ಯವೈಶ್ಯ ಸಂಸ್ಕೃತಿ ಸದನದಲ್ಲಿ ಸಮನ್ವಯ ಟ್ರಸ್ಟ್‌ನಿಂದ ಆರ್‌ಜಿಎಸ್ ಕೇಟರಿಂಗ್, ಭಜನಾ ಪರಿಷತ್, ಭಜನಾ ಮಂಡಳಿಗಳ ಒಕ್ಕೂಟ ಏರ್ಪಡಿಸಿದ್ದ ಗುರುವಂದನೆ, ಲಲಿತಾ ಸಹಸ್ರನಾಮ ಪಾರಾಯಣ ಪಠಣಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದರು.
ಬಹುತೇಕ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹಿರಿಯರು, ಮಧ್ಯವಯಸ್ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದನ್ನು ನಾವೆಲ್ಲರೂ ಕಾಣುತ್ತೇವೆ. ಯುವಜನರು ಧಾರ್ಮಿಕ ಚಟುವಟಿಕೆಯಿಂದ ದೂರ ಉಳಿಯುತ್ತಿರುವುದು ಬೇಸರದ ಸಂಗತಿ. ಮನೆಯಲ್ಲಿ ಹಿರಿಯರು ಮಕ್ಕಳಿಗೆ ಧಾರ್ಮಿಕ ಪರಂಪರೆ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಹೊಸನಗರ ಮೂಲೆಗದ್ದೆ ಸದಾಶಿವ ಆಶ್ರಮದ ಶ್ರೀ ಅಭಿನವ ಚನ್ನಬಸವ ಸ್ವಾಮೀಜಿ ಮಾತನಾಡಿ, ಗುರು-ಶಿಷ್ಯ ಪರಂಪರೆಯು ಭಾರತದಲ್ಲಿ ವಿಶೇಷ ಪ್ರಾಮುಖ್ಯ ಹೊಂದಿದೆ. ಎಲ್ಲ ಜಾತಿ, ಧರ್ಮ ಮೀರಿದ ಗುರು-ಶಿಷ್ಯರ ಸಂಬಂಧವನ್ನು ದೇಶದ ಇತಿಹಾಸದಲ್ಲಿ ಕಾಣಬಹುದು. ಪಾಲಕರು ಮಕ್ಕಳಿಗೆ ಸಂಸ್ಕಾರ ಮತ್ತು ಜೀವನ ಮೌಲ್ಯಗಳನ್ನು ಕಲಿಸಬೇಕು ಎಂದು ಹೇಳಿದರು.
ಲಲಿತಾ ಸಹಸ್ರನಾಮ ಪಾರಾಯಣದಲ್ಲಿ ನಗರದ 200ಕ್ಕೂ ಅಧಿಕ ಮಹಿಳೆಯರು ಪಾಲ್ಗೊಂಡಿದ್ದರು. ಸಿದ್ದಾಪುರದ ದೈವಜ್ಞ ಬ್ರಾಹ್ಮಣ ಮಹಾಸಭಾದ ಸಂತೋಷ್ ಭಟ್ ಗುರೂಜಿ, ಭಜನಾ ಪರಿಷತ್‌ನ ಶಬರೀಶ್ ಕಣ್ಣನ್, ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ನಿರ್ವಾಹಕ ನಿರ್ದೇಶಕ ಕಾಶಿ ಮುಂತಾದವರಿದ್ದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…