ರೇವ್​ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಜೈಲ್​ನಿಂದ ರಿಲೀಸ್!

1 Min Read
ರೇವ್​ಪಾರ್ಟಿಯಲ್ಲಿ ಭಾಗಿಯಾಗಿದ್ದ ತೆಲುಗು ನಟಿ ಹೇಮಾ ಜೈಲ್​ನಿಂದ ರಿಲೀಸ್!

ಬೆಂಗಳೂರು: ರೇವ್ ಪಾರ್ಟಿಯಲ್ಲಿ ಭಾಗಿಯಾಗಿ ಜೈಲು ಪಾಲಾಗಿದ್ದ ತೆಲುಗು ನಟಿ ಹೇಮಾ ಶುಕ್ರವಾರ ರಿಲೀಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ಕೋರ್ಟ್‌ನಿಂದ ಷರತ್ತು ಬದ್ಧ ಜಾಮೀನು ಪಡೆದಿರುವ ಹೇಮಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಇದನ್ನೂ ಓದಿ:‘ಆರ್​ಆರ್​ಆರ್​’ ದಾಖಲೆ ಮುರಿದ ‘ಕಲ್ಕಿ’.. ವಿದೇಶದಲ್ಲಿ ಪ್ರೀ-ಬುಕಿಂಗ್​ ಮೊತ್ತ ಕೇಳಿದ್ರೆ ಹೌಹಾರ್ತೀರಾ?

ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಹೇಮಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಎನ್‌ಡಿಪಿಎಸ್ ವಿಶೇಷ ಕೋರ್ಟ್ ಜೂ.12ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಪ್ರಕ್ರಿಯೆ ವಿಳಂಬ ಆದ ಹಿನ್ನೆಲೆಯಲ್ಲಿ ಶುಕ್ರವಾರ ಹೇಮಾರನ್ನು ಬಿಡುಗಡೆ ಮಾಡಲಾಯಿತು. ಈ ವೇಳೆ, ಹೇಮಾರನ್ನು ಕರೆದೊಯ್ಯಲು ಅವರ ಸಹೋದರ ಬಂದಿದ್ದರು.

ಬೆಂಗಳೂರು ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇತ್ತೀಚೆಗೆ ನಡೆದ ರೇವ್ ಪಾರ್ಟಿಯಲ್ಲಿ ಹೇಮಾ ಭಾಗಿಯಾಗಿದ್ದರು. ನಾನು ಬೆಂಗಳೂರಿನಲ್ಲಿ ಇಲ್ಲ, ಹೈದರಾಬಾದ್‌ನಲ್ಲಿರೋದಾಗಿ ರೇವ್​ ಪಾರ್ಟಿ ಮಾಡಿದ್ದ ರೆಸಾರ್ಟ್​ನಿಂದಲೇ ವಿಡಿಯೋ ಮಾಡಿ ಹೇಮಾ ದಿಕ್ಕು ತಪ್ಪಿಸಿದ್ದರು. ಬಳಿಕ ಡ್ರಗ್ಸ್ ಪಡೆದಿರುವ ಬಗ್ಗೆ ಪಾಸಿಟಿವ್ ರಿಪೋರ್ಟ್ ಬಂದ ಬೆನ್ನಲ್ಲೇ ನಟಿಗೆ 2 ಬಾರಿ ಪೊಲೀಸರು ನೋಟಿಸ್ ನೀಡಿದ್ದರು.‌ ಬಳಿಕ ವಿಚಾರಣೆಗೆ ಬಂದ ಹೇಮಾರನ್ನು ಪೊಲೀಸರು ಬಂಧಿಸಿದ್ದರು.

ನಾಲ್ಕನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಮ್‌ಎಫ್‌ಸಿ ನ್ಯಾಯಾಧೀಶರಾದ ಸಲ್ಮಾ ಎ.ಎಸ್ ಅವರಿದ್ದ ಪೀಠ ಜೂನ್ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿತ್ತು. ಹೀಗಾಗಿ ಹೇಮಾ ಜೈಲು ಸೇರಿದ್ದರು.

ಅಂದಹಾಗೆ, ಹೇಮಾ ಸುಮಾರು 250 ಚಿತ್ರಗಳಲ್ಲಿ ನಟಿಸಿದ್ದಾರೆ. ಸ್ಟಾರ್ ನಟರ ಚಿತ್ರಗಳಲ್ಲಿ ಖಾಯಂ ಪೋಷಕ ನಟಿಯಾಗಿ ಹೇಮಾ ಕೆಲಸ ಮಾಡಿದ್ದಾರೆ. ಕನ್ನಡದಲ್ಲೂ ನಟಿಸಿದ್ದ ಹೇಮಾ 2014ರಲ್ಲಿ ಪುನೀತ್ ರಾಜ್‌ಕುಮಾರ್ ನಟನೆಯ ಪವರ್ ಚಿತ್ರದಲ್ಲೂ ಕಾಣಿಸಿಕೊಂಡಿದ್ದರು. ವಿನಯ ವಿಧೇಯ ರಾಮ, ಸನ್ ಆಫ್ ಸತ್ಯಮೂರ್ತಿ, ಡಿಕ್ಟೆಟರ್, ಅತ್ತಾರಿಂಟಿಕಿ ದಾರೇದಿ, ಮಿರ್ಚಿ, ರಭಸ, ಬೃಂದಾವನಂ, ರೆಬೆಲ್, ಜುಲಾಯ್, ಮಗಧೀರ ಸೇರಿ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಗೋಲ್ಡ್ ಸ್ಕೀಂ ವಂಚನೆ: ಶಿಲ್ಪಾಶೆಟ್ಟಿ, ಪತಿ ರಾಜ್​ಕುಂದ್ರಾ ವಿರುದ್ಧ ತನಿಖೆಗೆ ಮುಂಬೈ ಕೋರ್ಟ್‌ ಆದೇಶ

See also  ಮುಲ್ಲನ್‌ಪುರದಲ್ಲಿ ಪಂಜಾಬ್ -ಗುಜರಾತ್ ಕಾದಾಟ
Share This Article