Tuesday, 20th November 2018  

Vijayavani

ರಾಜಧಾನಿಯಲ್ಲಿ ಹಸಿರು ಕ್ರಾಂತಿ-ಸಿಎಂ ಎಚ್​ಡಿಕೆ, ಡಿಸಿಎಂ ಪರಮೇಶ್ವರ್​ಗೆ ಡೆಡ್​​ಲೈನ್-ಕೂಡಲೇ ಸ್ಥಳಕ್ಕೆ ಬರುವಂತೆ ರೈತರ ಪಟ್ಟು        ಸೈಟ್ ಕೇಳ್ತಿಲ್ಲ, BMW ಕಾರೂ ಕೇಳ್ತಿಲ್ಲ-ನಾವು ಕೇಳ್ತಿರೋದು ಬೆಳೆದ ಬೆಲೆಗೆ ಬೆಲೆಯಷ್ಟೇ-ಸಚಿವ ಕಾಶಂಪೂರ್​​ಗೆ ಮನವಿ ಸಲ್ಲಿಕೆ        ರೈತರು, ಹೆಣ್ಮಕ್ಕಳ ವಿಚಾರದಲ್ಲಿ ಗೌರವ ಇದೆ-ನನ್ನ ಹೇಳಿಕೆಯಲ್ಲಿ ಯಾವುದೇ ದುರುದ್ದೇಶ ಇಲ್ಲ-ಸಿಎಂ ಹೇಳಿಕೆ ಬಿಡುಗಡೆ        ಸಿಎಂ ಕೂಡಲೇ ಕ್ಷಮೆ ಕೇಳಬೇಕು-ನಾಳಿನ ಕೋರ್​​​ ಕಮಿಟಿ ಸಭೆಯಲ್ಲಿ ಹೋರಾಟದ ನಿರ್ಧಾರ-ಸರ್ಕಾರದ ವಿರುದ್ಧ ಗುಡುಗಿದ ಬಿಜೆಪಿ        ₹3,300 ಕೋಟಿ, 132 ಕಿ.ಮೀ. ದೂರ-ಗುರಗಾಂವ್​​ನಲ್ಲಿ ಎಕ್ಸ್​​ಪ್ರೆಸ್​​ ಹೈವೇ ಲೋಕಾರ್ಪಣೆಗೊಳಿಸಿದ ಪ್ರಧಾನಿ        ರೈಲು ಬರುವ ವೇಳೆ ಹಳಿ ಮಧ್ಯೆ ಮಲಗಿದ ಭೂಪ-ಪ್ರಾಣದ ಹಂಗು ತೊರೆದು ಹುಚ್ಚು ಸಾಹಸ-ಹೈದ್ರಾಬಾದ್​ನಲ್ಲೊಂದು ಮಿರ‍್ಯಾಕಲ್       
Breaking News

ಕುದಿಯುತ್ತಿದೆ ಕರ್ನಾಟಕ

Saturday, 15.09.2018, 2:08 AM       No Comments

ಬೆಂಗಳೂರು: ಮಳೆಗಾಲ ಮುಗಿಯುವ ಮೊದಲೇ ಬೇಸಿಗೆಯನ್ನೂ ಮೀರಿಸುವಂಥ ಬಿಸಿಲ ಧಗೆಗೆ ರಾಜ್ಯ ಕುದಿಯಲಾರಂಭಿಸಿದೆ. ರಾಜ್ಯದ ಶೇ.91 ಭೌಗೋಳಿಕ ಪ್ರದೇಶದಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ತಲುಪಿದ್ದರೆ ಬಳ್ಳಾರಿ, ತುಮಕೂರು, ಚಿಕ್ಕಮಗಳೂರಲ್ಲಿ 37-38 ಡಿಗ್ರಿ ಸೆಲ್ಸಿಯಸ್ ದಾಖಲಾಗಿರುವುದು ಜನಜೀವನವನ್ನು ಹೈರಾಣಾಗಿಸಿದೆ. ರಾಜ್ಯದ ಬಹುತೇಕ ಕಡೆ ಭಾಗಶಃ ಮೋಡ ಕವಿದ ವಾತಾವರಣ ಸೃಷ್ಟಿಯಾಗುತ್ತಿದೆ. ಕೆಲ ಪ್ರದೇಶಗಳಲ್ಲಿ ಮೊದಲೇ ಒಣಗಿರುವ ಭೂಮಿ ತುಂತುರು ಮಳೆಯಿಂದಾಗಿ ಮತ್ತಷ್ಟು ಧಗೆ ಹೆಚ್ಚಿಸಿಕೊಳ್ಳುತ್ತಿದೆ.

ವಾಡಿಕೆಗಿಂತ ಅಧಿಕ ದಾಖಲು

ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಅವಧಿಯಲ್ಲಿ 26-27 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಬೇಕು. ಆದರೆ ಶುಕ್ರವಾರ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಇದೇ ರೀತಿ ಹಾಸನದಲ್ಲಿ 33.8 ಡಿಗ್ರಿ ಸೆ.(ವಾಡಿಕೆಗಿಂತ 7 ಡಿಗ್ರಿ ಸೆ.ಅಧಿಕ), ಮೈಸೂರಿನಲ್ಲಿ 33.9 ಡಿಗ್ರಿ ಸೆಲ್ಸಿಯಸ್(ವಾಡಿಕೆಗಿಂತ 4.4 ಡಿಗ್ರಿ ಸೆ. ಅಧಿಕ) ದಾಖಲಾಗಿದೆ.

ಮಳೆ ಕೊರತೆ ಕಾರಣ

ಸೆಪ್ಟೆಂಬರ್​ನಲ್ಲಿ ಕರ್ನಾಟಕ ಮತ್ತು ಸುತ್ತಮುತ್ತಲ ರಾಜ್ಯಗಳಲ್ಲಿ ಉಂಟಾಗಿರುವ ತೀವ್ರ ಮಳೆ ಕೊರತೆಯೇ ಬಿಸಿಲ ಬೇಗೆ ಹೆಚ್ಚಲು ಪ್ರಮುಖ ಕಾರಣವಾಗಿದೆ. ಸಾಮಾನ್ಯವಾಗಿ ಮಳೆಗಾಲದಲ್ಲಿ ಕರಾವಳಿ ಭಾಗದಿಂದ ತೇವಾಂಶಯುಕ್ತ ಗಾಳಿ ಬೀಸುತ್ತದೆ. ಆದರೆ ಈ ಬಾರಿ ಮಳೆ ಕೊರತೆಯಿಂದ ಗಾಳಿಯಲ್ಲಿ ತೇವಾಂಶ ಕಂಡುಬಂದಿಲ್ಲ. ಉತ್ತರದ ಕಡೆಯಿಂದ ಬೀಸುತ್ತಿರುವ ಬಿಸಿಗಾಳಿ ತಾಪಮಾನ ಮತ್ತಷ್ಟು ಹೆಚ್ಚಲು ಕಾರಣವಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್​ಎನ್​ಡಿಎಂಸಿ) ಅಧಿಕಾರಿಗಳು ‘ವಿಜಯವಾಣಿ’ಗೆ ತಿಳಿಸಿದ್ದಾರೆ.

ಮಲೆನಾಡು ಹಾಗೂ ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿದ್ದರಿಂದ ರಾಜ್ಯದ ಅಣೆಕಟ್ಟುಗಳು ಭರ್ತಿಯಾಗಿವೆ. ಆದರೆ ಬಿಸಿಲ ಝುಳ ಏರುತ್ತಿರುವುದರಿಂದ ನೀರು ಆವಿಯಾಗುವ ಸಾಧ್ಯತೆ ಹೆಚ್ಚಿದೆ.

| ಡಾ.ಜಿ.ಎಸ್.ಶ್ರೀನಿವಾಸ ರೆಡ್ಡಿ ನಿರ್ದೇಶಕ, ಕೆಎಸ್​ಎನ್​ಡಿಎಂಸಿ.

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ

ರಾಜ್ಯದೆಲ್ಲೆಡೆ ಸೆ.16-18ರವರೆಗೆ ಸಾಧಾರಣ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಕಳೆದೊಂದು ವಾರದಿಂದ ಆಗಾಗ ತುಂತುರು, ಸಾಧಾರಣ(1.5 ಸೆಂ.ಮೀ.ನಿಂದ 6.4 ಸೆಂ.ಮೀ.)ಮಳೆಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ ಹಾಗೂ ಕರಾವಳಿಯಲ್ಲಿ ಒಣಹವೆ ಮುಂದುವರಿದಿದೆ.

Leave a Reply

Your email address will not be published. Required fields are marked *

Back To Top