

ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ನ್ಯಾಯಾಲಯದಲ್ಲಿ ತಡೆಗಳಿಲ್ಲ. ಸ್ವಾಽನ ಇದ್ದರೆ, ಆದೇಶವಿಲ್ಲದೆ ಏಳಿಸುವ ಹಾಗಿಲ್ಲ ಎಂದು ಹೇಳಲಾಗಿದೆ. ಈ ಆದೇಶದಿಂದ ದೇವಸ್ಥಾದ ಜೀರ್ಣೋದ್ಧಾರಕ್ಕಾಗಲಿ, ದೇವಸ್ಥಾನದ ಜಾಗಕ್ಕಾಗಲಿ ಯಾವುದೇ ತೊಂದರೆಗಳಿಲ್ಲ. ಈಗ ನೀಡಿದ ಆದೇಶವನ್ನು ಪ್ರಶ್ನೆ ಮಾಡುವ ಜತೆಗೆ ದೇವಸ್ಥಾನದ ಎಲ್ಲ ಜಾಗವನ್ನು ಹಿಂಪಡೆಯಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅನ್ನಛತ್ರದಲ್ಲಿ ಕೆನರಾ ಬ್ಯಾಂಕ್ ೧೦ ಲಕ್ಷ ರೂ., ಕರ್ಣಾಟಕ ಬ್ಯಾಂಕ್ ೫ ಲಕ್ಷ ರೂ. ಹಾಗೂ ದಾನಿಗಳ ದೇಣಿಗೆಯಲ್ಲಿ ನಿರ್ಮಾಣವಾದ ಸ್ಟೀಮ್ ಬಾಯ್ಲರ್ ಸಿಸ್ಟಮ್ ಉದ್ಘಾಟಿಸಿ ಮಾತನಾಡಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮಾತನಾಡಿ, ಸುಧಾಕುಮಾರಿ ಅವರು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ನ್ಯಾಯಾಲಯದ ತೀರ್ಪನ್ನು ತಿರುಚುವ ಪ್ರಯತ್ನ ಮಾಡಿದ್ದಾರೆ ಮತ್ತು ತಪ್ಪು ದಾರಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ನಿಗದಿತ ಜಾಗದಲ್ಲಿ ಯಾರೂ ವಾಸ್ತವ್ಯವಿಲ್ಲ. ಕಟ್ಟಡ ನನ್ನದು, ಜಾಗ ದೇವಸ್ಥಾನದ್ದು ಎಂದಿದ್ದು ಅಲ್ಲಿ ಯಾವುದೇ ಕಟ್ಟಡವಿಲ್ಲ. ಕಟ್ಟಡ ಕಟ್ಟುವಂತಿಲ್ಲ ಎಂದು ನ್ಯಾಯಾಲಯ ಆದೇಶ ನೀಡಿದೆ. ಸಂಪೂರ್ಣ ಜವಾಬ್ದಾರಿ ದೇವಸ್ಥಾನದ್ದು ಎಂದು ನ್ಯಾಯಾಲಯ ಹೇಳಿದೆ ಎಂದು ತಿಳಿಸಿದರು.
ಪ್ರಧಾನ ಅರ್ಚಕ ವಸಂತ ಕುಮಾರ್ ಕೆದಿಲಾಯ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿದರು. ಕೆನರಾ ಬ್ಯಾಂಕ್ ರೀಜನಲ್ ಹೆಡ್ ರಂಜನ್ ಕುಮಾರ್, ಕರ್ಣಾಟಕ ಬ್ಯಾಂಕ್ ಚೀಫ್ ಮ್ಯಾನೇಜರ್ ಶ್ರೀಹರಿ, ಅಸಿಸ್ಟೆಂಟ್ ಮ್ಯಾನೇಜರ್ ಅಶೋಕ್ ಮೂಲ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಬಿ.ಈಶ್ವರ ಬೇಡೇಕರ್, ಕೃಷ್ಣವೇಣಿ, ನಳಿನಿ ಪಿ.ಶೆಟ್ಟಿ, ದಿನೇಶ್ ಕುಲಾಲ್ ಪಿ.ವಿ., ಮಹಾಬಲ ರೈ ಒಳತ್ತಡ್ಕ, ಸುಭಾಶ್ ರೈ ಬೆಳ್ಳಿಪ್ಪಾಡಿ, ವಿನಯ ಕುಮಾರ್ ಸುವರ್ಣ, ಕಾರ್ಯನಿರ್ವಹಣಾಽಕಾರಿ ಕೆ.ವಿ.ಶ್ರೀನಿವಾಸ ಉಪಸ್ಥಿತರಿದ್ದರು.
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಅನ್ನಸಂತರ್ಪಣೆಗೆ ೫ ಸಾವಿರದವರೆಗೆ ಜನರು ಆಗಮಿಸುತ್ತಿದ್ದಾರೆ. ವ್ಯವಸ್ಥಿತವಾಗಿ ನಡೆಯಬೇಕೆಂಬ ದೃಷ್ಟಿಯಿಂದ ೧೬.೭೫ ಲಕ್ಷ ರೂ. ವೆಚ್ಚದಲ್ಲಿ ಸ್ಟೀಮ್ ಬಾಯ್ಲರ್ ವ್ಯವಸ್ಥೆ ಅಳವಡಿಸಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಸ್ಟರ್ ಪ್ಲಾನ್ ಅನುಷ್ಠಾನಕ್ಕೆ ತರುವ ಬಗ್ಗೆ ಸಭೆ ಕರೆಯಲಾಗಿದೆ. ಅಽಕಾರಿಗಳು, ಸಮಿತಿಯವರು, ತಾಂತ್ರಿಕ ವಿಭಾಗದವರು ಇದರಲ್ಲಿ ಭಾಗವಹಿಸಲಿದ್ದಾರೆ. ೨೦ ಮಂದಿಯ ಜೀರ್ಣೋದ್ಧಾರ ಸಮಿತಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ.
| ಅಶೋಕ್ ಕುಮಾರ್ ರೈ, ಶಾಸಕರು