More

    ಕುಕ್ಕೆ, ಕದ್ರಿ ಆಡಳಿತ ಸಮಿತಿ ಶೀಘ್ರ

    ಮಂಗಳೂರು: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ‘ಎ’ ಗ್ರೇಡ್‌ನ ಕೆಲ ದೇವಾಲಯಗಳಿಗೆ ರಾಜ್ಯ ಧಾರ್ಮಿಕ ಪರಿಷತ್ ಮೂಲಕ ವ್ಯವಸ್ಥಾಪನಾ ಸಮಿತಿ ರಚಿಸಲಾಗಿದೆ. ಕುಕ್ಕೆ ಸುಬ್ರಹ್ಮಣ್ಯ, ಕದ್ರಿ ಸಹಿತ ಉಳಿದ ಕೆಲ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಶೀಘ್ರ ರಚಿಸಲಾಗುವುದು ಎಂದು ಸಚಿವ ಕೊಟ ಶ್ರೀನಿವಾಸ ಪೂಜಾರಿ ಹೇಳಿದರು.

    ದ.ಕ.ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ‘ಬಿ’ ಮತ್ತು ‘ಸಿ’ ಗ್ರೇಡ್ ದೇವಾಲಯಗಳ ವ್ಯವಸ್ಥಾಪನಾ ಸಮಿತಿಯನ್ನು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ರಚಿಸುತ್ತದೆ. ಆದರೆ ಧಾರ್ಮಿಕ ಪರಿಷತ್ ಸಭೆಗೆ ಡಿಸಿ ಗಳು ಸಮಯ ನೀಡುತ್ತಿಲ್ಲ ಎನ್ನುವ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಪ್ರತೀ ತಿಂಗಳ 5ರ ಒಳಗೆ ಧಾರ್ಮಿಕ ಪರಿಷತ್ ಸಭೆ ನಡೆಸಬೇಕು, ಜಿಲ್ಲಾಧಿಕಾರಿಗೆ ಸಾಧ್ಯವಾಗದಿದ್ದರೆ, ಎಡಿಸಿ ನೇತೃತ್ವದಲ್ಲಿ ಸಭೆ ನಡೆಸುವಂತೆ ಸೂಚಿಸಲಾಗಿದೆ ಎಂದರು.
    ಶಾಸಕ ಡಾ.ಭರತ್ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಉಪಾಧ್ಯಕ್ಷ ಸತೀಶ್ ಕುಂಪಲ, ವಕ್ತಾರರಾದ ರವಿಶಂಕರ ಮಿಜಾರು, ರಾಧಾಕೃಷ್ಣ, ಸಂದೇಶ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.

    ತೈಲ ತೆರಿಗೆ ಹಣ ಜನರ ಕಲ್ಯಾಣಕ್ಕೆ: ಅಂತಾರಾಷ್ಟ್ರೀಯವಾಗಿ ಕಚ್ಚಾ ತೈಲದ ಬೆಲೆ ಏರಿಕೆ, ಇಳಿಕೆ ಅನುಸಾರ ಪೆಟ್ರೋಲ್, ಡೀಸೆಲ್ ದರ ನಿಗದಿಯಾಗುತ್ತಿದೆ. ತೈಲೋತ್ಪನ್ನದ ಮೇಲಿನ ತೆರಿಗೆ ಹಣವನ್ನು ಅಭಿವೃದ್ಧಿ ಮತ್ತು ಜನ ಕಲ್ಯಾಣಕ್ಕಾಗಿ ಬಳಸಲಾಗುತ್ತಿದೆ ಎಂದು ಸಚಿವ ಹೇಳಿದರು. ಕೇಂದ್ರ ಸರ್ಕಾರದ ನಿಲುವನ್ನು ಸಮರ್ಥಿಸಿಕೊಳ್ಳುವ ಜತೆಗೆ, ಬಜೆಟನ್ನೂ ಶ್ಲಾಘಿಸಿದರು. ಆರೋಗ್ಯ ಮತ್ತು ರೈತರ ಕಲ್ಯಾಣಕ್ಕೆ ವಿಶೇಷ ಆದ್ಯತೆ ನೀಡಿರುವ ಈ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನೇಕ ಕೊಡುಗೆಗಳು ದೊರೆತಿವೆ ಎಂದರು.

    ಸಪ್ತಪದಿ ಯೋಜನೆಯಲ್ಲಿ ಪ್ರತೀ ತಿಂಗಳು ಮುಹೂರ್ತವಿದ್ದ ದಿನ, ನಿಗದಿತ ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಇಲಾಖೆಯ ಆಗಮ ಪಂಡಿತರು ಸೂಚಿಸಿದ ದಿನ ಒಂದು ಜೋಡಿ ಇದ್ದರೂ ವಿವಾಹ ನಡೆಯಲಿದೆ.
    ಕೋಟ ಶ್ರೀನಿವಾಸ ಪೂಜಾರಿ ಧಾರ್ಮಿಕ ದತ್ತಿ ಇಲಾಖೆ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts