More

    ಮುಜರಾಯಿ ದೇವಾಲಯಗಳಲ್ಲಿ ವಸ್ತ್ರಸಂಹಿತೆ : ಸಚಿವರಿಗೆ ಮನವಿ ಪತ್ರ

    ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಅಳವಡಿಸುವಂತೆ ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘ ಸರ್ಕಾರವನ್ನು ಒತ್ತಾಯಿಸಿದೆ. ಈ ಸಂಬಂಧ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸಂಘದ ಪ್ರಮುಖರು ಬುಧವಾರ ಮನವಿ ಪತ್ರ ಸಲ್ಲಿಸಿದರು.

    ಮನವಿ ಸ್ವೀಕರಿಸಿದ ಸಚಿವರು, ದೇವಾಲಯಗಳಲ್ಲಿ ವಸ್ತ್ರಸಂಹಿತೆ ಕುರಿತು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ಚರ್ಚಿಸಿ ಅನುಷ್ಠಾನಗೊಳಿಸುವುದಾಗಿ ಭರವಸೆ ನೀಡಿದರು.

    ಪಾವಿತ್ರ್ಯತೆ ಮತ್ತು ಸಾತ್ತ್ವಿಕತೆಯನ್ನು ಕಾಪಾಡುವುದು ಪ್ರತಿಯೊಬ್ಬ ಭಕ್ತ, ಧರ್ಮದರ್ಶಿಗಳ, ಅರ್ಚಕರ ಕರ್ತವ್ಯ. ಆದರೆ ಜನರು ಆಧುನಿಕ ಪಾಶ್ಚಿಮಾತ್ಯ ಜಗತ್ತಿಗೆ ಮಾರು ಹೋಗಿ ಅಸಭ್ಯ ಉಡುಪುಗಳನ್ನು ಧರಿಸಿ ದೇವಾಲಯಕ್ಕೆ ಬರುತ್ತಿದ್ದಾರೆ. ಇದು ಧಾರ್ಮಿಕ ಪರಂಪರೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡುತ್ತಿದೆ. ದೇವಸ್ಥಾನಗಳ ಪಾವಿತ್ರ್ಯತೆ ಕಾಪಾಡಲು ವಸಸಂಹಿತೆ ಅಳವಡಿಸಬೇಕು ಎಂದು ಸಂಘದ ಪ್ರಮುಖರು ಮನವಿ ಮಾಡಿದರು.

    ಧಾರ್ಮಿಕ ದತ್ತಿ ಇಲಾಖೆಯ ರಾಜ್ಯ ಧಾರ್ಮಿಕ ಪರಿಷತ್‌ನಲ್ಲಿ ರಾಜ್ಯದ 211 ಎ ಗ್ರೇಡ್ ದೇವಸ್ಥಾನಗಳಲ್ಲಿ ಭಕ್ತರಿಗೆ ವಸ ಸಂಹಿತೆಯನ್ನು ಅಳವಡಿಸುವ ಬಗ್ಗೆ ಚಿಂತನೆ ನಡೆಸಿದೆ. ಚಿಕ್ಕಮಗಳೂರಿನ ಇತಿಹಾಸ ಪ್ರಸಿದ್ಧ ದೇವಿರಮ್ಮನ ದೇಗುಲ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಈಗಾಗಲೆ ವಸಸಂಹಿತೆ ಜಾರಿ ಮಾಡಿದೆ. ದೇವಾಲಯದ ಆವರಣದಲ್ಲಿ ಮೊಬೈಲ್ ೆನ್ ಬಳಕೆ ನಿಷೇಸಲಾಗಿದೆ. ಈ ನಿಯಮಗಳನ್ನು ಇಲಾಖೆಯಡಿ ಬರುವ ಎಲ್ಲ ದೇವಾಲಯಗಳಲ್ಲೂ ಅಳವಡಿಸಲು ವಿಶೇಷ ಸುತ್ತೋಲೆ ಹೊರಡಿಸುವಂತೆ ಕೋರಿದರು.

    ಕರ್ನಾಟಕ ದೇವಸ್ಥಾನ-ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಸಂಯೋಜಕ ಮೋಹನ್ ಗೌಡ, ಬ್ರಹ್ಮರ್ಷಿ ಆನಂದ ಸಿದ್ಧಿಪೀಠದ ಡಾ. ಮಹರ್ಷಿ ಆನಂದ ಗುರೂಜೀ, ಆನೇಕಲ್ ಮುಜರಾಯಿ ದೇವಾಲಯಗಳ ಅರ್ಚಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸೂರ್ಯನಾರಾಯಣ ದೀಕ್ಷಿತ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಂಘದ ಉಪಾಧ್ಯಕ್ಷ ರಾಘವೇಂದ್ರ ಭಟ್, ಧಾರ್ಮಿಕ ಚಿಂತಕ ಪ್ರಣವ ಶರ್ಮಾ ಗುರೂಜೀ, ರಾಜಾಜಿನಗರದ ವಾಸವಿ, ಸಾಯಿ ಬಾಬಾ ದೇವಸ್ಥಾನದ ಅಧ್ಯಕ್ಷ ಎ.ಎಸ್.ಎನ್. ಗುಪ್ತಾ, ದಾಸನಪುರದ ಪದ್ಮಾವತಿ ರಮಾನುಜ ಪೀಠದ ಉಪಾಧ್ಯಕ್ಷ ಎಸ್. ಜಯರಾಮ, ಆನಂದರಾವ್ ಸರ್ಕಲ್ನ ನಾಗಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಮಹಾದೇವ, ವಕೀಲ ಕೃಷ್ಣಸ್ವಾಮಿ, ನಾರಾಯಣಘಟ್ಟದ ಶ್ರೀ ಚೌಡೇಶ್ವರಿ ದೇವಸ್ಥಾನದ ಸೊಮೇಶ್ ರೆಡ್ಡಿ, ಹಿಂದೂ ಜನಜಾಗೃತಿ ಸಮಿತಿಯ ಶರತ್‌ಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts