ಅರಕಲಗೂಡು: ತಾಲೂಕಿನ ರಾಮನಾಥಪುರ ಹೋಬಳಿಯ ಬಸವನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಶನಿವಾರ ಶ್ರೀಕನ್ನಂಬಾಡಿ ಅಮ್ಮನವರ ದೇವಾಲಯದ ಪ್ರತಿಷ್ಠಾಪನಾ ಕಾರ್ಯಕ್ರಮ ಧಾರ್ಮಿಕ ವಿಧಾನಗಳೊಂದಿಗೆ ನೆರವೇರಿತು. ದೇವಸ್ಥಾನದಲ್ಲಿ ಹೋಮ, ಹವನ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ವಿಧಿವತ್ತಾಗಿ ನಡೆದವು. ಭಕ್ತರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ಧನ್ಯತೆ ಮೆರೆದರು. ಶಾಸಕ ಎ. ಮಂಜು ಪೂಜಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

TAGGED:ark temple