More

    ಧಾರವಾಡ ಜಿಲ್ಲೆಯ 2.20 ಲಕ್ಷ ಮನೆಗಳಿಗೆ ತಲುಪಿದ ಮಂತ್ರಾಕ್ಷತೆ

    ಹುಬ್ಬಳ್ಳಿ : ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ನಿಂದ ನೀಡಿರುವ ಮಂತ್ರಾಕ್ಷತೆಯನ್ನು ಧಾರವಾಡ ಜಿಲ್ಲೆಯ 2.20 ಲಕ್ಷ ಮನೆಗಳಿಗೆ ಇದುವರೆಗೆ ತಲುಪಿಸಲಾಗಿದೆ. ಜ. 22ರಂದು ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಟ್ರಸ್ಟ್ ವತಿಯಿಂದ ಅಕ್ಷತೆ ಪೂಜೆ ಮಾಡಿ, ದೇಶದಾದ್ಯಂತ ಪ್ರತಿ ಮನೆಗೆ ವಿತರಿಸುವ ಕಾರ್ಯ ಕೈಗೊಳ್ಳಲಾಗಿದೆ.

    ಜ.1 ರಿಂದ 15ರವರೆಗೆ ಮನೆ ಮನೆಗೆ ಮಂತ್ರಾಕ್ಷತೆ ವಿತರಣೆ ಕಾರ್ಯ ನಡೆಯುತ್ತಿದೆ. ಹುಬ್ಬಳ್ಳಿಯಲ್ಲಿ 1.40 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ. ಇನ್ನೂ ಎರಡು ದಿನಗಳಲ್ಲಿ ಧಾರವಾಡ ಜಿಲ್ಲೆಯ 50 ಸಾವಿರ ಮನೆಗಳಿಗೆ ಮಂತ್ರಾಕ್ಷತೆ ತಲುಪಿಸುವ ಗುರಿಯನ್ನು ಸಂಘ ಪರಿವಾರದ ಕಾರ್ಯಕರ್ತರು ಹೊಂದಿದ್ದಾರೆ.

    ನ.26ರಂದು ನವನಗರದ ಶ್ರೀರಾಮ ಮಂದಿರದಲ್ಲಿ ಮಂತ್ರಾಕ್ಷತೆಗೆ ಪೂಜೆ ಮಾಡಿ, ವಿಶ್ವ ಹಿಂದು ಪರಿಷತ್ ಕಾರ್ಯಾಲಯದ ಮೂಲಕ ಹುಬ್ಬಳ್ಳಿಗೆ ತರಲಾಯಿತು. ಜ.1 ರಿಂದ ಧಾರವಾಡ ಜಿಲ್ಲೆಯಾದ್ಯಂತ ಮಂತ್ರಾಕ್ಷತೆ ವಿತರಿಸುವ ಕಾರ್ಯ ಪ್ರಾರಂಭಿಸಲಾಯಿತು. ಪ್ರತಿ ಹಳ್ಳಿ, ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ನಿತ್ಯ ಬೆಳಗ್ಗೆಯಿಂದ ಸಂಜೆಯವರೆಗೆ ಸಾವಿರಾರು ಕಾರ್ಯಕರ್ತರು ಮನೆ ಮನೆಗಳಿಗೆ ಮಂತ್ರಾಕ್ಷತೆ ವಿತರಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವಿಶ್ವ ಹಿಂದು ಪರಿಷತ್ ಧಾರವಾಡ ವಿಭಾಗ ಕಾರ್ಯದರ್ಶಿ ವಿನಾಯಕ ತಲಗೇರಿ ಮಾಹಿತಿ ನೀಡಿದ್ದಾರೆ.

    ============

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts