

ಸುಳ್ಯ: ತಾಲೂಕಿನಾದ್ಯಂತ ಧಾರ್ಮಿಕ ಕ್ಷೇತ್ರಗಳಲ್ಲಿ ಸಂಭ್ರಮ-ಸಡಗರದ ನಾಗರ ಪಂಚಮಿ ಆಚರಿಸಲಾಯಿತು.
ತಾಲೂಕಿನ ಎಲ್ಲ ದೇವಸ್ಥಾನಗಳಲ್ಲೂ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ, ಧಾರ್ಮಿಕ ಕಾರ್ಯಕ್ರಮಗಳು ನಡೆದವು. ನಾಗದೇವರಿಗೆ ಕ್ಷೀರಾಭಿಷೇಕ, ಜಲಾಭಿಷೇಕ, ಸೀಯಾಳಾಭಿಷೇಕ ಮತ್ತಿತರ ವಿಶೇಷ ಅಭಿಷೇಕಗಳು ನಡೆದವು.
ನಗರದ ಶ್ರೀ ಚೆನ್ನಕೇಶವ ದೇವಾಲಯ, ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನ,
ಕಾಯರ್ತೋಡಿ ಸೂರ್ತಿಲ ಶ್ರೀ ರಕ್ತೇಶ್ವರಿ ದೈವಸ್ಥಾನ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಪೆರುವಾಜೆ ಶ್ರೀ ಜಲದುರ್ಗಾ ದೇವಿ ದೇವಸ್ಥಾನ, ಕಾಂತಮಂಗಲ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಸಂಪಾಜೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನಗಳಲ್ಲಿ ನಾಗರ ಪಂಚಮಿ ಆಚರಿಸಲಾಯಿತು.