ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರ್ಚಕ

Accused Priest
Published on

ಭೋಪಾಲ್​: ಆಘಾತಕಾರಿ ಘಟನೆ ಒಂದರಲ್ಲಿ ದೇವಸ್ಥಾನದ ಅರ್ಚಕರೊಬ್ಬರು ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ.

ಕೃತ್ಯ ಎಸಗಿದ ಆರೋಪಿಯನ್ನು ಸಂತೋಷ್​ ಶರ್ಮಾ ಎಂದು ಗುರುತಿಸಲಾಗಿದ್ದು, ಈತನ ವಿರುದ್ಧ ಪೋಕ್ಸೋ ಸೇರಿದಂತೆ ಭಾರತ ದಂಡ ಸಂಹಿತೆಯ ವಿವಿಧ ಕಾನೂನುಗಳಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ಆತನನ್ನು ಪತ್ತೆ ಹಚ್ಚಲು ತಂಡ ಒಂದನ್ನು ರಚಿಸಲಾಗಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಬಾಲಕಿಯನ್ನು ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net