ದೇಗುಲದಲ್ಲಿ ಪೂಜೆ ಮಾಡುವಾಗ ಆಕಸ್ಮಿಕವಾಗಿ ಸೀರೆಗೆ ಬೆಂಕಿ, ಮುಂದೇನಾಯ್ತು?

ಹುಬ್ಬಳ್ಳಿ: ವಿಶ್ವೇಶ್ವರನಗರದ ವಿಶ್ವನಾಥ ದೇವಸ್ಥಾನದಲ್ಲಿ ಪೂಜೆ ಮಾಡುವಾಗ ಮಹಿಳೆಯೊಬ್ಬರಿಗೆ ಆಕಸ್ಮಿಕವಾಗಿ ಸೀರೆಗೆ ಬೆಂಕಿ ಹೊತ್ತಿಕೊಂಡು ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೂಜೆ ಮಾಡುವ ಸಮಯದಲ್ಲಿ ಸೀರೆಯ ಕೆಳಭಾಗಕ್ಕೆ ತಗುಲಿದ ಬೆಂಕಿ ಜೋರಾಗಿ ಎಲ್ಲೆಡೆ ವ್ಯಾಪಿಸಿದೆ. ಬೆಂಕಿ ಜೋರಾಗಿ ಹೊತ್ತಿಕೊಳ್ಳುತ್ತಿದ್ದಂತೆ ದೇವಸ್ಥಾನದ ಆವರಣ ತುಂಬೆಲ್ಲ ಮಹಿಳೆ ಓಡಾಡಿದ್ದಾರೆ. ಕೊನೆಗೆ ದೇವಸ್ಥಾನದ ಒಳಗಡೆ ಹೋಗಿ ಅಲ್ಪ ಸ್ವಲ್ಪ ರಕ್ಷಣೆ ಮಾಡಿಕೊಂಡಿದ್ದಾರೆ.

ದೇವಸ್ಥಾನದಲ್ಲಿದ್ದ ಸಾರ್ವಜನಿಕರು ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಂಕಿ ಹತ್ತಿಕೊಂಡ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *