

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿ
ಜೀವನ ಕಟ್ಟಿಕೊಡಲು ದೇವಸ್ಥಾನ ಬೇಕು. ಮಾರಕ ರೋಗಗಳಿಗೆ ತಡೆ ನೀಡಿ ಮಾರಿಯಮ್ಮನಾಗಿ ಪ್ರಸಿದ್ಧಳಾದಳು ಎಂದು ಬಾರ್ಕೂರು ಮಹಾಸಂಸ್ಥಾನದ ವಿದ್ಯಾ ವಾಚಸ್ಪತಿ ವಿಶ್ವ ಸಂತೋಷ್ ಭಾರತಿ ಶ್ರೀಗಳು ಹೇಳಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಪ್ರತಿಷ್ಠಾಪನೆ ಬ್ರಹ್ಮಕಲಶೋತ್ಸವದ ಐದನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು
ಶಿರೂರು ಮಠದ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿ, ಗೌರಿಗದ್ದೆ ದತ್ತ ಆಶ್ರಮದ ಅವಧೂತ ಶ್ರೀ ವಿನಯ್ ಗುರೂಜಿ ಆಶೀರ್ವಚನ ನೀಡಿದರು.
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಮುಂಬೈ ಸಮಿತಿ ಅಧ್ಯಕ್ಷ ಸುಧಾಕರ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಅಂತಾರಾಷ್ಟ್ರೀಯ ಸೇವಾ ಸಮಿತಿ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ, ಕಾರ್ಯಾಧ್ಯಕ್ಷ ಶಶಿಧರ್ ಶೆಟ್ಟಿ ಮಲ್ಲಾರ್, ದಿವಾಕರ ಶೆಟ್ಟಿ ಮಸ್ಕತ್, ಅನಿಲ್ ಬಲ್ಲಾಳ್ ಕಾಪು ಬೀಡು, ಪ್ರವೀಣ್ ಶೆಟ್ಟಿ ವಕ್ವಾಡಿ, ಮಹೇಶ್ ಶೆಟ್ಟಿ, ಸಂತೋಷ್ ಶೆಟ್ಟಿ ಇನ್ನಾ ಕುರ್ಕಿಲಬೆಟ್ಟು, ಸುಗ್ಗಿ ಸುಧಾಕರ್ ಶೆಟ್ಟಿ, ಚಂದ್ರಹಾಸ್ ಶೆಟ್ಟಿ ಪೂನ, ಪೃಥ್ವಿರಾಜ್ ಶೆಟ್ಟಿ, ಶ್ವೇತಾ ರತ್ನಾಕರ್ ಶೆಟ್ಟಿ, ಯೋಗೀಶ್ ಶೆಟ್ಟಿ ಬಾಲಾಜಿ, ಉಪಸ್ಥಿತರಿದ್ದರು. ದೇವಿಪ್ರಸಾದ್ ಶೆಟ್ಟಿ ಪ್ರಸ್ತಾವನೆಗೈದರು. ಅಶೋಕ್ ಪಕ್ಜಳ ಕಾರ್ಯಕ್ರಮ ನಿರೂಪಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಧಾರ್ಮಿಕ ಸಭೆ ಉದ್ಘಾಟಿಸಿದರು. ರಾಜೇಶ್ ರೈ ಕೈರಂಗಳ ಹಾಗೂ ತುಂಗಾ ಸುಧಾಕರ್ ಹೆಗ್ಡೆ ಮತ್ತು ರಂಜನಿ ಹೆಗ್ಡೆ ದಂಪತಿಯನ್ನು ಗೌರವಿಸಲಾಯಿತು ಹಾಗೂ ದಾನಿಗಳನ್ನು ಸನ್ಮಾನಿಸಲಾಯಿತು.