

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಕಳೆದ ಎರಡು ತಿಂಗಳಿನಿಂದ ಬಾಗಿಲು ಮುಚ್ಚಿದ್ದ ರಾಜ್ಯದ ಎಲ್ಲ ದೇವಸ್ಥಾನಗಳು ಜೂ.1ರಿಂದ ಬಾಗಿಲು ತೆರೆಯಲಿವೆ.
ದೈಹಿಕ ಅಂತರ ಕಾಯ್ದುಕೊಂಡು ಪೂಜೆಗೆ ಅವಕಾಶ ಮಾಡಿಕೊಡಲು ಸರ್ಕಾರ ನಿರ್ಧರಿಸಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲು ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ ರಾಜ್ಯದಲ್ಲಿ ಮೇ 31ರವರೆಗೂ ಇರಲಿದೆ ಮಳೆಯ ಅಬ್ಬರ
ದೇವಸ್ಥಾನದಲ್ಲಿ ದೇವರ ದರ್ಶನ ಮಾತ್ರವಲ್ಲದೆ, ಹಲವು ಸೇವೆ/ಹರಕೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಹೆಚ್ಚಿನ ಜನ ಸೇರಿ ಜಾತ್ರಾ ಮಹೋತ್ಸವಗಳನ್ನು ನಡೆಸುವುದಕ್ಕೆ ಅವಕಾಶ ಇರುವುದಿಲ್ಲ.
ಮಸೀದಿ, ಚರ್ಚ್‌ಗಳನ್ನು ತೆರೆಯುವ ಬಗ್ಗೆ ಸದ್ಯಕ್ಕೆ ನಿರ್ಧಾರ ತೆಗೆದುಕೊಂಡಿಲ್ಲ. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಿಸಿದ ದೇವಾಲಯಗಳ ಬಗ್ಗೆಯಷ್ಟೇ ಸಿಎಂ ಜತೆ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮುಜರಾಯಿ ಸಚಿವ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.