More

    15 ಸಾವಿರ ಶಿಕ್ಷಕರ ನೇಮಕಾತಿ, ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ: ಸಚಿವ ಬಿ.ಸಿ. ನಾಗೇಶ್

    ಬೆಂಗಳೂರು: ರಾಜ್ಯದಲ್ಲಿನ 15 ಸಾವಿರ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಸಂಪೂರ್ಣ ಪಟ್ಟಿ ಇಲಾಖೆಯ ವೆಬ್​ಸೈಟ್​ನಲ್ಲಿ ಇರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

    ಇಂದು ಈ ಕುರಿತಂತೆ ಸುದ್ದಿಗೋಷ್ಠಿ ಕರೆದು ಮಾತನಾಡಿದ ಸಚಿವರು ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ ಮಾಡಿರುವ ಕುರಿತು ಮಾಹಿತಿ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿ ಸಂಬಂಧಿಸಿದ 1:1 ಅನುಪಾತದ ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಒಟ್ಟು 15,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಅದರಲ್ಲಿ 13,363 ಹುದ್ದೆಗಳಿಗೆ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

    ಲಿಂಗತ್ವ ಅಲ್ಪಸಂಖ್ಯಾತರಿಗೆ ಶಿಕ್ಷಕರ ನೇಮಕಾತಿಯಲ್ಲಿ ಶೇ.1ರಷ್ಟು ಮೀಸಲಾತಿ ನೀಡಲಾಗಿತ್ತು. ಪ್ರಪ್ರಥಮ ಬಾರಿಗೆ ಮೂವರು ಲಿಂಗತ್ವ ಅಲ್ಪಸಂಖ್ಯಾತರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಮೊದಲ ಬಾರಿಗೆ ಅರ್ಹ ಎಂಜಿನಿಯರಿಂಗ್ ಪದವೀಧರರಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. 19 ಜನರು 1:1 ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ ಎಂದೂ ಸಚಿವರು ತಿಳಿಸಿದ್ದಾರೆ.

    15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಕಟ್ಟುನಿಟ್ಟಾಗಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿತ್ತು. ಅದರಂತೆ ಅಧಿಸೂಚನೆ ಹೊರಡಿಸಿದ ದಿನದಿಂದ 1:1 ಅನುಪಾತದ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆವರೆಗಿನ ಪ್ರಕ್ರಿಯೆಯನ್ನು 9 ತಿಂಗಳ ಒಳಗೆ ಪೂರ್ಣಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    15 ಸಾವಿರ ಶಿಕ್ಷಕರ ನೇಮಕಾತಿ, ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ: ಸಚಿವ ಬಿ.ಸಿ. ನಾಗೇಶ್

    ಮತ್ತೆ ಬರುತ್ತೆ ಆರ್ಕುಟ್​?; ರಿಪ್​ ಟ್ವಿಟರ್​ ಟ್ರೆಂಡಿಂಗ್​ ಬೆನ್ನಿಗೇ ಗರಿಗೆದರಿದ ನಿರೀಕ್ಷೆ..

    ಒಂದೂವರೆ ವರ್ಷದ ಮಗನನ್ನೇ ಮಾರಿದ ತಾಯಿ; ನಾಲ್ಕೂವರೆ ವರ್ಷ ಹುಡುಕಾಡಿ ಪುತ್ರನನ್ನು ಪತ್ತೆ ಮಾಡಿ ಪಡೆದ ತಂದೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts