More

    ಮಂಡ್ಯದಲ್ಲಿ ಭಾರಿ ಮಳೆ, ಪ್ರವಾಹದಲ್ಲಿ ಸಿಲುಕಿದ್ದ 10 ಮಂದಿಯ ರಕ್ಷಣೆ..

    ಮಂಡ್ಯ: ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇನ್ನೂ ನಾಲ್ಕು ದಿನ ಮಳೆಯ ತೀವ್ರತೆ ಮತ್ತಷ್ಟು ಜೋರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಮಧ್ಯೆ ಮಂಡ್ಯದಲ್ಲಿ ಭಾರಿ ಮಳೆಯಾಗಿದ್ದು, ರಸ್ತೆ ಮೇಲೆಲ್ಲ ನದಿಯಂತೆ ನೀರು ಹರಿದಿದೆ. ಮಾತ್ರವಲ್ಲ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಜನರು ಸಿಲುಕಿಕೊಂಡು ಪರದಾಟ ಅನುಭವಿಸಿದ ಪ್ರಕರಣವೂ ನಡೆದಿದೆ.

    ಭಾರಿ ಮಳೆಯಿಂದಾಗಿ ಕೆ.ಆರ್​.ಪೇಟೆ ತಾಲೂಕಿನ ಕೋಡಿಮಾರನಹಳ್ಳಿಯ ಗ್ರಾಮದಲ್ಲಿ ತಗ್ಗುಪ್ರದೇಶಕ್ಕೆ ನೀರು ನುಗ್ಗಿದ ಪರಿಣಾಮವಾಗಿ ಪ್ರವಾಹದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ ಇಲ್ಲಿನ ತೋಟದ ಮನೆಯೊಂದರಲ್ಲಿ ವಾಸವಿದ್ದ ಹತ್ತು ಮಂದಿ, ಆರು ಜಾನುವಾರು, ಒಂದು ನೀರುನಾಯಿ ಪ್ರವಾಹಕ್ಕೆ ಸಿಲುಕಿದ್ದು, ಅವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

    ಮತ್ತೊಂದೆಡೆ ಕೆ.ಆರ್.ಪೇಟೆ ತಾಲೂಕು ಕಿಕ್ಕೇರಿ ಗ್ರಾಮದಲ್ಲಿರುವ ಅಮಾನಿಕೆರೆಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದ ಪರಿಸ್ಥಿತಿಯಿಂದಾಗಿ ರಾಜ್ಯ ಹೆದ್ದಾರಿ ಸಂಪರ್ಕ ಸೇತುವೆ ಮುಳುಗಡೆಯಾಗಿ, ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ನೂರಾರು ಎಕರೆ ಜಮೀನು ಜಲಾವೃತಗೊಂಡಿದ್ದು, ಕೃಷಿ ಪಂಪ್‌ಸೆಟ್ ಮುಳುಗಡೆಯಾಗಿದ್ದು, ಹಲವೆಡೆ ವಿದ್ಯಾರ್ಥಿಗಳು, ಕೂಲಿಕಾರರು ಮತ್ತು ಪ್ರಯಾಣಿಕರ ಪರದಾಟ ಎದುರಿಸುವಂತಾಗಿದೆ.

    ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಇದೇ ಮೊದಲ ಸಲ ರಾಜ್ಯ ಸಚಿವರ ಸ್ಥಾನಮಾನ ನೀಡಿದ ಸರ್ಕಾರ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts