ಬೆಂಗಳೂರು: 200 ಯೂನಿಟ್ ಉಚಿತ ವಿದ್ಯುತ್ ವಿಚಾರದಲ್ಲಿ ಬಾಡಿಗೆದಾರರ ನಡುವೆ ಉಂಟಾಗಿದ್ದ ಗೊಂದಲಕ್ಕೆ ಇಂಧನ ಸಚಿವ ಕೆ.ಜೆ. ಜಾರ್ಜ್ ತೆರೆಎಳೆದಿದ್ದಾರೆ. ಬಾಡಿಗೆದಾರರಿಗೂ ಉಚಿತ ವಿದ್ಯುತ್ ಸಿಗಲಿದೆ ಎಂದು ತಿಳಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲ ಬಾಡಿಗೆದಾರರಿಗೂ ಉಚಿತವಾಗಿ 200 ಯೂನಿಟ್ ವಿದ್ಯುತ್ ದೊರೆಯುತ್ತದೆ ಎಂದರು. ಆದರೆ, ಬಾಡಿಗೆದಾರರು ಅರ್ಜಿ ಸಲ್ಲಿಸುವಾಗ ಸೂಕ್ತವಾದ ದಾಖಲೆಗಳು ಇರಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಮಕ್ಕಳೆದುರು ಅರೆಬೆತ್ತಲಾಗಿದ್ದ ಪ್ರಕರಣ: ರೆಹನಾ ಫಾತಿಮಾಗೆ ಕೇರಳ ಹೈಕೋರ್ಟ್ನಿಂದ ಬಿಗ್ ರಿಲೀಫ್!
ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದಾರೆ ಎಂಬ ದಾಖಲೆ ಕೊಡಬೇಕಾಗುತ್ತದೆ. ಇದರೊಂದಿಗೆ ವಿದ್ಯುತ್ ಬಿಲ್ ಮತ್ತು ಬಾಡಿಗೆ ಕರಾರು ಪತ್ರವನ್ನು ಅರ್ಜಿಯ ಜತೆಗೆ ಒದಗಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.
ಮನೆ ಮಾಲೀಕ ಕಡ್ಡಾಯವಾಗಿ ಆಸ್ತಿ ತೆರಿಗೆ ಕಟ್ಟಿರಬೇಕು. ಎಷ್ಟು ಬಾಡಿಗೆ ಮನೆಗಳಿವೆ ಎಂದು ಘೋಷಣೆ ಮಾಡಿರಬೇಕು. ಬಾಡಿಗೆದಾರರು ಕಳ್ಳಾಟ ಆಡಿರುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗವುದು ಎಂದು ಇಂಧನ ಸಚಿವರು ಎಚ್ಚರಿಕೆ ನೀಡಿದ್ದಾರೆ.
ವಾಹನ ಸವಾರರೇ ಎಚ್ಚರ: ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದ್ರೆ ದಂಡದ ಜತೆ ಕ್ರಿಮಿನಲ್ ಕೇಸ್ ಸಹ ದಾಖಲಾಗುತ್ತೆ!
ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ಕೊಹ್ಲಿ? ಇಲ್ಲಿದೆ ಅಸಲಿ ಸಂಗತಿ…