More

    ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಆಸ್ಪತ್ರೆಯಿಂದ ಬಿಡುಗಡೆ

    ಮುಂಬೈ: ಕೋವಿಡ್-19 ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಮಾಜಿ ನಾಯಕ ಸಚಿನ್ ತೆಂಡುಲ್ಕರ್, ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೀಗ ಮನೆಯಲ್ಲೇ ಕೆಲದಿನಗಳ ಕಾಲ ಐಸೋಲೇಷನ್‌ಗೆ ಒಳಗಾಗಲಿದ್ದಾರೆ. ಇದೇ ತಿಂಗಳು 48ನೇ ವರ್ಷಕ್ಕೆ ಕಾಲಿಡಲಿರುವ ಸಚಿನ್ ತೆಂಡುಲ್ಕರ್, ಆಸ್ಪತ್ರೆಯಿಂದ ಬಿಡುಗಡೆಯಾಗುವ ಕುರಿತು ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: VIDEO: ಅನುಷ್ಕಾ ಶಕ್ತಿ ಪ್ರದರ್ಶನಕ್ಕೆ ವಿರಾಟ್ ಕೊಹ್ಲಿ ಬೌಲ್ಡ್ ಔಟ್..!

    ‘ಆಸ್ಪತ್ರೆಯಿಂದ ಬಿಡುಗಡೆಗೊಂಡು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾಗಲಿದ್ದೇನೆ. ಕೆಲ ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯುವೆ. ನನ್ನ ಆರೋಗ್ಯ ಸುಧಾರಣೆಗಾಗಿ ಶುಭಕೋರಿದ ಎಲ್ಲರಿಗೂ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿದ್ದ ವೇಳೆ ತೀವ್ರ ನಿಗಾವಹಿಸಿದ ವೈದ್ಯಕೀಯ ಸಿಬ್ಬಂದಿಗೆ ವಿಶೇಷ ಧನ್ಯವಾದಗಳು ಎಂದಿದ್ದಾರೆ. ಸಚಿನ್ ತೆಂಡುಲ್ಕರ್‌ಗೆ ಮಾರ್ಚ್ 27 ರಂದು ಕೋವಿಡ್-19 ಪಾಸಿಟಿವ್ ಕಾಣಿಸಿಕೊಂಡಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಏಪ್ರಿಲ್ 2 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಸಚಿನ್ ಕುಟುಂಬದ ಇತರ ಸದಸ್ಯರ ಕೋವಿಡ್-19 ವರದಿ ನೆಗೆಟಿವ್ ಬಂದಿತ್ತು.

    ಇದನ್ನೂ ಓದಿ: ಐಪಿಎಲ್ ಪದಾರ್ಪಣೆಗೆ ಸಜ್ಜಾದ ಹೊಸ ಮುಖಗಳು

    ಸಚಿನ್ ತೆಂಡುಲ್ಕರ್ ಇತ್ತೀಚೆಗೆ ಛತ್ತೀಸ್‌ಗಢದ ರಾಯ್‌ಪುರದಲ್ಲಿ ನಡೆದ ರಸ್ತೆ ಸುರಕ್ಷತಾ ವರ್ಲ್ಡ್ ಸಿರೀಸ್ ಟಿ20 ಟೂರ್ನಿಯಲ್ಲಿ ಭಾರತ ಲೆಜೆಂಡ್ಸ್ ತಂಡದ ನಾಯಕನಾಗಿದ್ದರು. ಭಾರತ ಲೆಜೆಂಡ್ಸ್ ತಂಡ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಪ್ರಶಸ್ತಿ ಜಯಿಸಿತ್ತು. ಅಲ್ಲದೆ, ಭಾರತ ಲೆಜೆಂಡ್ಸ್ ತಂಡದಲ್ಲಿದ್ದ ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಎಸ್.ಬದ್ರಿನಾಥ್‌ಗೂ ಕರೊನಾ ವೈರಸ್ ಕಾಣಿಸಿಕೊಂಡಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts