More

    ಪ್ರಗತಿ ವಾಹನಗಳಿಗೆ ಚಾಲನೆ

    ಹುಬ್ಬಳ್ಳಿ : ಧಾರವಾಡ ಲೋಕಸಭೆ ಕ್ಷೇತ್ರದ ಪ್ರಗತಿ ವಾಹನಗಳಿಗೆ ನಗರದ ಚಿಟಗುಪ್ಪಿ ಆಸ್ಪತ್ರೆ ಆವರಣದಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಕಚೇರಿ ಎದುರು ಶಾಸಕ ಮಹೇಶ ಟೆಂಗಿನಕಾಯಿ ಸೋಮವಾರ ಚಾಲನೆ ನೀಡಿದರು.

    ವಿಕಸಿತ ಭಾರತ, ಅಭಿವೃದ್ಧಿ ಶೀಲ ಧಾರವಾಡ, ಮೋದಿ ಗ್ಯಾರಂಟಿ ಎಂಬ ಶೀರ್ಷಿಕೆ ಎರಡು ಪ್ರಗತಿ ವಾಹನಗಳು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿವೆ. ವಾಹನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಭಾವಚಿತ್ರ ಲಗತ್ತಿಸಲಾಗಿದೆ. ಪ್ರಧಾನ ಮಂತ್ರಿ ಕಿಸಾನ ಸನ್ಮಾನ, ಪ್ರಧಾನ ಮಂತ್ರಿ ಉಜ್ವಲ ಯೋಜನೆಗಳ ಮಾಹಿತಿ, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿನ ತಂತ್ರಜ್ಞಾನ, ಜಲ ಜೀವನ ಮಿಷನ್, ಪ್ರಧಾನಿ ಮಂತ್ರಿ ಉಜ್ವಲ ಯೋಜನೆ ಜಿಲ್ಲೆಯಲ್ಲಿ ಎಷ್ಟು ಫಲಾನುಭವಿಗಳಿಗೆ ದೊರೆತಿದೆ ಎಂಬ ವಿವರ ಸಹ ಈ ವಾಹನಗಳಲ್ಲಿ ಇದೆ.

    ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಧಾರವಾಡ ಜಿಲ್ಲೆಯಾದ್ಯಂತೆ ಹಲವಾರು ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅವುಗಳ ವಿವರಗಳ ಪ್ರಗತಿ ವಾಹನ ಯಾತ್ರೆಗೆ ಚಾಲನೆ ದೊರೆತಿದೆ. ಸಚಿವ ಜೋಶಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಎರಡು ವಾಹನಗಳು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿವೆ ಎಂದು ಹೇಳಿದರು.

    ಫಸಲ್​ಬೀಮಾ ಯೋಜನೆ, ಕಿಸನ್ ಸನ್ಮಾನ ಯೋಜನೆ, ರಸ್ತೆಗಳ ಅಭಿವೃದ್ಧಿ, ಐಐಟಿ, ಐಐಐಟಿ ಹಾಗೂ ಕಿಮ್ಸ್ ಆಸ್ಪತ್ರೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸಚಿವ ಜೋಶಿ ಅನುದಾನ ತಂದಿದ್ದಾರೆ ಎಂದು ತಿಳಿಸಿದರು.

    ಶಾಸಕ ಎಂ.ಆರ್. ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ನಾಗರಾಜ ಛಬ್ಬಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮೇಯರ್ ವೀಣಾ ಬರದ್ವಾಡ, ಜ್ಯೋತಿ ಪಾಟೀಲ, ಉಮಾ ಮುಕುಂದ, ಲಕ್ಷೀ ಮೇಸ್ತ್ರಿ, ಮೀನಾಕ್ಷಿ ವಂಟಮೂರಿ, ಡಾ. ಕ್ರಾಂತಿಕಿರಣ, ಸಂತೋಷ ಚವ್ಹಾಣ, ವಿಜಯಾನಂದ ಶೆಟ್ಟಿ, ಸಂಜಯ ಕಪಟಕರ, ರವಿ ನಾಯಕ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts