More

    ಸ್ವೀಪ್‌ನಿಂದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ

    ಶಿವಮೊಗ್ಗ: ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಸ್ವೀಪ್ ಚಟುವಟಿಕೆಗಳು ವಿಭಿನ್ನ ರೀತಿಯಲ್ಲಿ ಕಾರ್ಯಗತವಾಗುತ್ತಿವೆ. ಇದರ ಮುಂದುವರಿದ ಭಾಗವಾಗಿ ಶನಿವಾರ ನಗರದ ಎನ್‌ಇಎಸ್ ಮೈದಾನದಲ್ಲಿ ಸ್ವೀಪ್ ಕಪ್ ಹೆಸರಿನಲ್ಲಿ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಏರ್ಪಡಿಸಲಾಗಿತ್ತು. ವಿವಿಧ ಇಲಾಖೆ ಸಿಬ್ಬಂದಿ ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಭಾಗವಹಿಸಿದ್ದರು.

    ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಜಿಪಂ ಸಿಇಒ ಸ್ನೇಹಲ್ ಲೋಖಂಡೆ, ಮತದಾನ ಜಾಗೃತಿಗಾಗಿ ಜಿಲ್ಲೆಯ ವಿವಿಧೆಡೆ ವಾಕಥಾನ್, ಜಾಥಾ, ರ‌್ಯಾಲಿ, ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಜಿಲ್ಲೆಯಲ್ಲಿ ಶೇ.100 ಮತದಾನ ಆಗಬೇಕೆಂಬುದು ಮುಖ್ಯ ಗುರಿಯಾಗಿದೆ ಎಂದರು.
    ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ, ಮತದಾನ ಜಾಗೃತಿ ಕುರಿತು ಜಿಲ್ಲೆಯಲ್ಲಿ ಅತ್ಯಂತ ಕ್ರಿಯಾಶೀಲ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಸ್ವೀಪ್ ಕಪ್ ಕೂಡ ಒಂದಾಗಿದೆ. ಸ್ಪರ್ಧಾಳುಗಳೆಲ್ಲ ಸ್ಪರ್ಧಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಪಾಲ್ಗೊಂಡು ಮತದಾನ ಜಾಗೃತಿ ಮೂಡಿಸಬೇಕು. ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಜಿಲ್ಲೆಯು ಮಾದರಿಯಾಗಬೇಕೆಂದು ಆಶಿಸಿದರು.
    ನಗರಪಾಲಿಕೆ ಆಯುಕ್ತ ಕೆ.ಮಾಯಣ್ಣಗೌಡ ಮಾತನಾಡಿ, ಮತದಾನ ಜಾಗೃತಿ ಕುರಿತು ಸ್ವೀಪ್ ವತಿಯಿಂದ ಬಗೆಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಮೇ 7ರಂದು ಎಲ್ಲ ಮತದಾರರು ಮತದಾನ ಮಾಡುವ ಮೂಲಕ ಹಕ್ಕು ಚಲಾಯಿಸಬೇಕು. ಸದೃಢ ಪ್ರಜಾಪ್ರಭುತ್ವಕ್ಕೆ ಸಹಕರಿಸಬೇಕೆಂದರು.
    ಮೊದಲ ವಿಭಾಗದಲ್ಲಿ ಗ್ರಾಮೀಣಾಭಿವೃದಿ ಮತ್ತು ಪಂಚಾಯತ್ ರಾಜ್-ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ, ಆರೋಗ್ಯ-ಶಿಕ್ಷಣ ಇಲಾಖೆ ಹಾಗೂ ಕಂದಾಯ-ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಡುವೆ ಪಂದ್ಯಾವಳಿ ನಡೆಯಿತು.
    ಇನ್ನೊಂದು ವಿಭಾಗದಲ್ಲಿ ನಗರಪಾಲಿಕೆ-ಅರಣ್ಯ ಇಲಾಖೆ, ಮೆಸ್ಕಾಂ-ಪೊಲೀಸ್ ಇಲಾಖೆ, ರಾಜ್ಯ ಲೆಕ್ಕಪತ್ರ-ಕೆಎಸ್‌ಆರ್‌ಪಿ ನಡುವೆ ಪಂದ್ಯಾವಳಿ ನಡೆಯಿತು.
    ರಾಷ್ಟ್ರಮಟ್ಟದ ಕ್ರಿಕೆಟ್ ಆಟಗಾರ್ತಿ ಅದಿತಿ, ಕೆಎಸ್‌ಆರ್‌ಪಿ ಕಮಾಂಡೆಂಟ್ ಯುವಕುಮಾರ್, ಜಿಪಂ ಯೋಜನಾ ನಿರ್ದೇಶಕ ರಂಗಸ್ವಾಮಿ, ಜಿಪಂ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ವಾರ್ತಾಧಿಕಾರಿ ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts