More

    VIDEO| ಗುಜರಾತ್​ನ ಖೇಡಾದಲ್ಲಿ ಶೋಭಯಾತ್ರೆ ವೇಳೆ ಕಲ್ಲು ತೂರಾಟ; ಪರಿಸ್ಥಿತಿ ಉದ್ವಿಗ್ನ

    ಅಹಮದಬಾದ್​: ಗುಜರಾತ್​ನ ಖೇಡಾ ಜಿಲ್ಲೆಯಲ್ಲಿ ಶೋಭಾಯತ್ರೆ ನಡೆಸುತ್ತಿದ್ದ ವೇಳೆ ಕಲ್ಲುತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಪೊಲೀಸರ ಮೇಲೂ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದು, ಅಧಿಕಾರಿಗಳು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಪ್ರತಿ ವರ್ಷದಂತೆ ಈ ವರ್ಷವೂ ಸಹ ಖೇಡಾ ಜಿಲ್ಲೆಯ ಶಿಬನ ದೇವಾಲಯ ವತಿಯಿಂದ ಉತ್ಸವವನ್ನು ಹಮ್ಮಿಕೊಳ್ಳಲಾಗಿತ್ತು. ಉತ್ಸವದಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಮೆರವಣಿಗೆ ತೀನ್​​ಬತ್ತಿ ಪ್ರದೇಶ ಪ್ರವೇಶಿಸಿದ ವೇಳೆ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಎರಡು ಸಮುದಾಯಗಳ ನಡುವೆ ವೈಷಮ್ಯ ಉಂಟಾಗಿದ್ದು,  ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. 

    ಇದನ್ನೂ ಓದಿ: ತಂದೆಯಾಗಿ ಬಡ್ತಿ ಪಡೆದ ಗ್ಲೆನ್​ ಮ್ಯಾಕ್ಸ್​ವೆಲ್; ಗಂಡು ಮಗುವಿಗೆ ಜನ್ಮ ನೀಡಿದ ವಿನಿ ರಾಮನ್​

    ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಜೇಶ್​ ಗಾಧಿಯಾ ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಘಟನೆಯಲ್ಲಿ ಮೂವರು ಪೊಲೀಸ್​ ಅಧಿಕಾರಿಗಳು ಸೇರಿದಂತೆ 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದ್ದು, ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು.

    ಕಲ್ಲುತೂರಾಟ ನಡೆದ ಪ್ರದೇಶದಲ್ಲಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಮುಖಂಡರನ್ನು ಕರೆದು ಶಾಂತಿ ಸಭೆ ನಡೆಸಲಾಗಿದ್ದು, ಅಧಿಕಾರಿಗಳು ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾರು ವದಂತಿಗಳನ್ನು ಹಬ್ಬಿಸಬೇಡಿ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಾಯ ಮಾಡಿ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ರಾಜೇಶ್​ ಗಾಧಿಯಾ ವಿನಂತಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts