More

    ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯ

    ತೇರದಾಳ: ಬೆಳಗಾವಿ ಜಿಲ್ಲೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ವಿಶ್ವಗುರು ಬಸವೇಶ್ವರ ಮೂರ್ತಿಗಳಿಗೆ ಅವಮಾನ ಹಾಗೂ ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ನಡೆಸಿ ಸೌಹಾರ್ದತೆಗೆ ಧಕ್ಕೆ ತರುತ್ತಿರುವ ರಾಜ್ಯದಲ್ಲಿನ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಗಳನ್ನು ಸರ್ಕಾರ ಕೂಡಲೇ ನಿಷೇಧಗೊಳಿಸಬೇಕು ಎಂದು ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳು, ರಾಜಕೀಯ ಮುಖಂಡರು, ಇನ್ನಿತರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಬಸ್ ನಿಲ್ದಾಣ ಬಳಿ ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿಯನ್ನು ಗುರುವಾರ ಬಂದ್ ಮಾಡಿ, ಮಹಾರಾಷ್ಟ್ರ ಮುಖ್ಯಮಂತ್ರಿ ಪ್ರತಿಕೃತಿ ದಹನಗೊಳಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿ ನಿರ್ಮಿಸಿ ಅರ್ಧ ಗಂಟೆಗೂ ಅಧಿಕ ಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಎಂಇಎಸ್ ಹಾಗೂ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

    ಮುಖಂಡರಾದ ಪ್ರವೀಣ ನಾಡಗೌಡ, ಮಂಜುನಾಥ ಜಮಖಂಡಿ, ರಾಮಣ್ಣ ಹಿಡಕಲ್, ರವಿ ಸಲಬನ್ನವರ ಮಾತನಾಡಿ, ಕನ್ನಡಿಗರ ಮೇಲೆ ಹಾಗೂ ಕನ್ನಡ ನೆಲದ ಬಗ್ಗೆ ಪದೇ ಪದೆ ಕಿರಿಕಿರಿ ಮಾಡುತ್ತಿರುವ ಎಂಇಎಸ್ ಸಂಘಟನೆ ಹಾಗೂ ಮಹಾರಾಷ್ಟ್ರ ಕನ್ನಡಿಗರ ತಾಳ್ಮೆಯನ್ನು ಪರೀಕ್ಷೆ ಮಾಡುತ್ತಿರುವುದು ಸರಿಯಲ್ಲ ಎಂದರು.
    ಗೃಹ ಸಚಿವರಿಗೆ ಬರೆದ ಮನವಿ ಪತ್ರವನ್ನು ಉಪತಹಸೀಲ್ದಾರ್ ಶ್ರೀಕಾಂತ ಮಾಯನ್ನವರ ಅವರಿಗೆ ಸಲ್ಲಿಸಲಾಯಿತು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts