More

    ಮೂವರು ವಿದ್ಯಾರ್ಥಿಗಳು ಹಾಜರು

    ತೇರದಾಳ: ಕೋವಿಡ್-19 ಇಳಿಮುಖಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ನ.17 ರಿಂದ ಪದವಿ ಕಾಲೇಜಿನ ಅಂತಿಮ ವರ್ಷದ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಿದೆ. ಕಾಲೇಜುಗಳು ಆರಂಭಗೊಂಡು 15 ದಿನ ಗತಿಸಿದರೂ ಪಟ್ಟಣದ ಪದವಿ ಕಾಲೇಜುಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ.

    ಬುಧವಾರ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕೇವಲ ಮೂರು ವಿದ್ಯಾರ್ಥಿಗಳು ಆಗಮಿಸಿದ್ದು, ಪರಸ್ಪರ ಅಂತರದೊಂದಿಗೆ ಉಪನ್ಯಾಸಕರು ತರಗತಿ ನಡೆಸಿದರು.

    ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೋವಿಡ್ ತಪಾಸಣೆ ಕಡ್ಡಾಯಗೊಳಿಸಲಾಗಿದೆ. ಸುಮಾರು ಮೂವತ್ತು ವಿದ್ಯಾರ್ಥಿಗಳು ತಪಾಸಣೆ ಮಾಡಿಸಿಕೊಂಡಿದ್ದು, ಅವರಲ್ಲಿ ಮೂವರ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಕಾಲೇಜಿಗೆ ಆಗಮಿಸಿದ್ದಾರೆ. ಇನ್ನುಳಿದವರ ವರದಿ ಬರಬೇಕಿದೆ ಎಂದು ಪ್ರಾಚಾರ್ಯ ಎ.ಎಸ್. ಪೂಜಾರಿ ತಿಳಿಸಿದರು.

    ಈಗಾಗಲೇ ಕಾಲೇಜಿನ ಎಲ್ಲ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದ್ದು, ವಿದ್ಯಾರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts