More

    ಹಳ್ಳ ಹೂಳೆತ್ತುವ ಕಾಮಗಾರಿ ಅಪೂರ್ಣ

    ತೇರದಾಳ: ಸಮೀಪದ ಹಳಿಂಗಳಿ ಗ್ರಾಪಂ ಅಧಿಕಾರಿಗಳ ನಿರ್ಲಕ್ಷೃದಿಂದಾಗಿ ಹಳ್ಳ ಹೂಳೆತ್ತುವ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಹಳ್ಳದ ಮಳೆ ನೀರು ಗ್ರಾಮದ 6ನೇ ವಾರ್ಡ್ ಸುತ್ತಲಿನ ಜಮೀನು ಹಾಗೂ ಮನೆಗಳಿಗೆ ನುಗ್ಗುತ್ತಿದೆ.

    ನಿವಾಸಿಗಳು ಮನೆ ಬಿಟ್ಟು ಹೊರಗೆ ಬಾರದ ಸ್ಥಿತಿ ನಿರ್ಮಾಣವಾಗಿದ್ದು ಯಾವೊಬ್ಬ ಅಧಿಕಾರಿ ಕೂಡ ಸಮಸ್ಯೆ ಬಗ್ಗೆ ಗಮನ ಹರಿಸಿಲ್ಲ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    2019-20ನೇ ಸಾಲಿನ ನರೇಗಾ ಯೋಜನೆಯಡಿ ಅಂದಾಜು 6 ಲಕ್ಷ ರೂ. ವೆಚ್ಚದಲ್ಲಿ ಹಳ್ಳ ಹೂಳೆತ್ತುವ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಖಾಸಗಿ ವ್ಯಕ್ತಿಯೊಬ್ಬರು ಅದಕ್ಕೆ ತಕರಾರು ಮಾಡಿದ್ದರಿಂದ ಕೆಲಸವನ್ನು ಅರ್ಧಕ್ಕೆ ಬಿಡಲಾಗಿದೆ. ಇದರಿಂದ ಮಳೆ ಬಂದಾಗಲೆಲ್ಲ ಅಲ್ಲಿನ ಮನೆಗಳಿಗೆ ನೀರು ನುಗ್ಗುತ್ತಿದೆ. ಹಳ್ಳಕ್ಕೆ ಒಡ್ಡು ಹಾಕಿದ್ದರಿಂದ ನೀರು ಮತ್ತಷ್ಟು ಹೆಚ್ಚಿಗೆ ನಿಲ್ಲುತ್ತಿದ್ದು ಸಮಸ್ಯೆ ಬಗ್ಗೆ ಗ್ರಾಪಂ ಅಧಿಕಾರಿಗಳು ಹಾಗೂ ಶಾಸಕರ ಗಮನಕ್ಕೆ ತಂದರೂ ಯಾವುದೇ ಪ್ರಯೋಜವಾಗಿಲ್ಲ.

    ಮಳೆ ನೀರು ಹಳ್ಳಕ್ಕೆ ಹರಿದು ಹೋಗದ ಕಾರಣ ಕಬ್ಬಿನ ಗದ್ದೆಗೆ ನುಗ್ಗುತ್ತಿದ್ದು ಹತ್ತಾರು ಎಕರೆ ಬೆಳೆ ನಷ್ಟವಾಗಿದೆ. ಆದ್ದರಿಂದ ಕೂಡಲೇ ಸಮಸ್ಯೆ ಸರಿಪಡಿಸಲು ಕ್ರಮ ಕೈಗೊಳ್ಳಬೇಕು. ಬೆಳೆ ಹಾನಿಗೆ ಪರಿಹಾರ ನೀಡಬೇಕು ಎಂದು ಜಿಪಂ ಸದಸ್ಯೆ ಲಲಿತಾ ರಾಜು ನಂದೆಪ್ಪನವರ ಆಗ್ರಹಿಸಿದ್ದಾರೆ.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts