18 C
Bangalore
Friday, December 6, 2019

ಪಾಠಕ್ಕೆ ತಾತ್ಕಾಲಿಕ ಕಟ್ಟಿಗೆ ಬೋರ್ಡ್ ಗತಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ತೇರದಾಳ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಿರ್ಮಿಸಲಾದ ಹೆಚ್ಚುವರಿ ಕೊಠಡಿಗಳ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಕಟ್ಟಿಗೆ ಬೋರ್ಡ್ ಬಳಸಿ ಉಪನ್ಯಾಸಕರು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾರೆ.

2014-15ನೇ ಸಾಲಿನಲ್ಲಿ 40 ಲಕ್ಷ ರೂ. ಅನುದಾನದಲ್ಲಿ ಬಾಗಲಕೋಟೆಯ ನಿರ್ಮಿತಿ ಕೇಂದ್ರದವರು ಕಾಮಗಾರಿ ಕೈಗೊಂಡಿದ್ದಾರೆ. ಕಟ್ಟಡ ನಿರ್ಮಾಣವಾಗಿ ವರ್ಷಗಳೇ ಕಳೆದರೂ ಕಟ್ಟಡದ ಮುಂಭಾಗದಲ್ಲಿ ಅಗೆದ ತಗ್ಗುಗಳು ಹಾಗೆಯೇ ಇದ್ದು, ಸಮತಟ್ಟು ಮಾಡಬೇಕಿದೆ. ಮುಂಭಾಗದಲ್ಲಿ ವಿಶಾಲವಾದ ಕಟ್ಟೆ ನಿರ್ಮಾಣ ಮಾಡಬೇಕಿದ್ದು, ತಗ್ಗುಗಳಿಂದಾಗಿ ಈ ಕೆಲಸ ಸಾಧ್ಯವಾತ್ತಿಲ್ಲ. ಕಾಮಗಾರಿ ಕಳಪೆಯಾಗಿದ್ದು, ಈಗಲೇ ಮೆಟ್ಟಿಲುಗಳು ಕಿತ್ತು ಹೋಗುತ್ತಿವೆ. ಹೀಗಾಗಿ ತಗ್ಗು-ಮುಳ್ಳಿನ ಕಂಟಿಗಳ ಮಧ್ಯೆಯೇ ವಿದ್ಯಾರ್ಥಿಗಳು ಕಟ್ಟಡವನ್ನು ಪ್ರವೇಶಿಸಬೇಕಿದೆ.

ಬೋರ್ಡ್ ಇಲ್ಲ
ಕಟ್ಟಡ ನಿರ್ಮಾಣವಾಗಿ ವಿದ್ಯಾರ್ಥಿಗಳು ಪಾಠ ಕಲಿಕೆಯಲ್ಲಿ ತೊಡಗಿದ್ದರೂ ಕಪ್ಪು ಹಲಗೆ (ಬ್ಲಾೃಕ್ ಬೋರ್ಡ್) ನಿರ್ಮಾಣವಾಗಿಲ್ಲ. ಹೀಗಾಗಿ ಕಟ್ಟಿಗೆಯ ತಾತ್ಕಾಲಿಕ ಬೋರ್ಡ್ ಇಟ್ಟು ಉಪನ್ಯಾಸಕರು ಪಾಠ ಮಾಡುತ್ತಿದ್ದಾರೆ. ಕೊಠಡಿಗಳಲ್ಲಿ ್ಯಾನ್‌ಗಳನ್ನು ಕೂಡ ಅಳವಡಿಸಿಲ್ಲ.

ನಿರ್ಮಿತ ಕೇಂದ್ರದ ನಿರ್ಲಕ್ಷೃ
ಕಟ್ಟಡ ಮುಗಿಸಿ ಹಸ್ತಾಂತರಿಸಬೇಕಿದ್ದ ನಿರ್ಮಿತಿ ಕೇಂದ್ರದ ಅಧಿಕಾರಿಗಳು, ಹಸ್ತಾಂತರ ಪ್ರಕ್ರಿಯೆಯಲ್ಲಿ ನಿರ್ಲಕ್ಷೃ ವಹಿಸಿದ್ದರಿಂದ ಸರ್ಕಾರ ಹಣ ಪೋಲಾಗುತ್ತಿದೆ. ಅನುದಾನ ಬಂದರೂ ಪೂರ್ಣ ಪ್ರಮಾಣದಲ್ಲಿ ಕೆಲಸ ಮಾಡದ ಕಾರಣ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

ಆಟಕ್ಕಿಲ್ಲ ಸುಸಜ್ಜಿತ ಮೈದಾನ
ನಾಲ್ಕಾರು ಎಕರೆ ವಿಶಾಲ ಜಾಗದಲ್ಲಿ ನಿರ್ಮಾಣವಾದ ಕಾಲೇಜಿನ ಬೃಹತ್ ಕಟ್ಟಡಕ್ಕೆ ಸುಸಜ್ಜಿತ ಸಮತಟ್ಟಾದ ಆಟದ ಮೈದಾನದ ಅವಶ್ಯಕತೆ ಇದೆ. ವಿದ್ಯಾರ್ಥಿಗಳು ಕ್ರೀಡಾ ಚಟುವಟಿಯಲ್ಲಿ ತೊಡಗಬೇಕೆಂದರೆ ತಗ್ಗು-ಗುಂಡಿ, ಕಲ್ಲುಗಳಿಂದ ಕೂಡಿರುವ ಜಾಗದಲ್ಲಿ ಆಟವಾಡಬೇಕಿದೆ. ಮೈದಾನ ಸಮತಟ್ಟು ಮಾಡಿ ಅಭಿವೃದ್ಧಿಪಡಿಸಬೇಕಿದೆ.

ಕಾಲೇಜು ಜಾಗ ಒತ್ತುವರಿ
ಕಾಲೇಜಿನ ಜಾಗ ಐದು ಎಕರೆ ಇದೆ. ಸದ್ಯ ಕೇವಲ ಒಂದೂವರೆ ಎಕರೆಯಷ್ಟು ಕಟ್ಟಡ ಹೊಂದಿದ್ದು, ಇದರಲ್ಲಿ ಎರಡ್ಮೂರು ಎಕರೆಯಷ್ಟು ಜಾಗದಲ್ಲಿ ಸಾರ್ವಜನಿಕರು ಅನಧಿಕೃತವಾಗಿ ಒತ್ತುವರಿ ಮಾಡುವುದರ ಮೂಲಕ ಶೇಡ್‌ಗಳನ್ನು ಹಾಕಿಕೊಂಡಿದ್ದಾರೆ. ಸರ್ಕಾರದ ಆಸ್ತಿಯೂ ಅನಧಿಕೃತ ಜನರ ಪಾಲಾಗುತ್ತಿದೆ. ಇದರ ಬಗ್ಗೆ ಆಡಳಿತ ಮಂಡಳಿ ಸೇರಿ ಸರ್ಕಾರದ ಅಧಿಕಾರಿಗಳು ಗಮನಹರಿಸಿ ಕಾಲೇಜಿನ ಆಸ್ತಿ ಉಳಿಸಬೇಕಿದೆ.

ಮೂಲ ಸೌಲಭ್ಯ ಒದಗಿಸಲಿ
ಪ್ರಥಮ ದರ್ಜೆ ಕಾಲೇಜು ಪಟ್ಟಣ ಸೇರಿ ಸುತ್ತಮುತ್ತಲಿನ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾಧಾನ ಮಾಡುತ್ತಿದೆ. ಆದರೆ, ಆಂತರಿಕವಾಗಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳನ್ನು ಪರಿಹರಿಸಿ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕಿದೆ.

ನಿರ್ಮಿತಿ ಕೇಂದ್ರದವರು ನಿರ್ಮಿಸಿದ ಹೆಚ್ಚುವರಿ ಕಟ್ಟಡಗಳಲ್ಲಿ ಬಾಕಿ ಉಳಿದ ಕೆಲಸಗಳ ಕುರಿತು ಸಂಬಂಧಿಸಿದವರ ಗಮನಕ್ಕೆ ತರಲಾಗುವುದು. ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಗೃಹ, ವಿಶಾಲ ಮೈದಾನದ ನಿರ್ಮಾಣ ಕುರಿತು ಪ್ರಯತ್ನಿಸಲಾಗುವುದು.
ವಿನಾಯಕ ಬಂಕಾಪುರ, ಪುರಸಭೆ ಸದಸ್ಯ, ತೇರದಾಳ

ಕಾಲೇಜಿನ ಹೆಚ್ಚುವರಿ ಕೊಠಡಿಗಳಲ್ಲಿ ಬೋರ್ಡ್ ಅಳವಡಿಸುವುದು ಸೇರಿ ಮತ್ತಿತರ ಬಾಕಿ ಉಳಿದ ಕೆಲಸಗಳ ಕುರಿತಂತೆ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಹೇಳಲಾಗಿದ್ದು, ಸ್ಪಂದಿಸುತ್ತಿಲ್ಲ.
ಎ.ಎಸ್.ಪೂಜಾರಿ, ಪ್ರಾಚಾರ್ಯ

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...