More

    ಮೈಸೂರಿನ ಟೆರೇಷಿಯನ್ ಕಾಲೇಜು ಚಾಂಪಿಯನ್

    ಉತ್ತಮ ಪ್ರದರ್ಶನ ನೀಡಿದ ನಗರದ ಟೆರೇಷಿಯನ್ ಕಾಲೇಜು ತಂಡ ಮೈಸೂರು ವಿಶ್ವವಿದ್ಯಾಲಯ ಅಂತರ ಕಾಲೇಜು ಅಂತರ ವಲಯ ಮಹಿಳಾ ಹಾಕಿ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರ ಹೊಮ್ಮಿತು.

    ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗ, ಹುಣಸೂರು ಸರ್ಕಾರಿ ಮಹಿಳಾ ಕಾಲೇಜು ವತಿಯಿಂದ ಸ್ಪೋರ್ಟ್ಸ್ ಪೆವಿಲಿಯನ್ ಹಾಕಿ ಮೈದಾನದಲ್ಲಿ ಗುರುವಾರ ನಡೆದ ಫೈನಲ್ ಪಂದ್ಯದಲ್ಲಿ ಎಸ್‌ಬಿಆರ್‌ಆರ್ ಮಹಾಜನ ಕಾಲೇಜು ತಂಡದ ವಿರುದ್ಧ 3-0 ಗೋಲುಗಳಿಂದ ಜಯ ಸಾಧಿಸಿತು. ಅಂತಿಮ ಪಂದ್ಯದಲ್ಲಿ ಸೋತ ಮಹಾಜನ ಕಾಲೇಜು ತಂಡ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿಕೊಂಡಿತು.

    ಮೂರನೇ ಸ್ಥಾನಕ್ಕಾಗಿ ನಡೆದ ಪಂದ್ಯದಲ್ಲಿ ನಾಗಮಂಗಲದ ಬಿಜಿಎಸ್ ಕಾಲೇಜು ತಂಡ 3-0 ಗೋಲುಗಳಿಂದ ಮೈಸೂರಿನ ಸರಸ್ವತಿಪುರಂನ ಜೆಎಸ್‌ಎಸ್ ಕಾಲೇಜು ವಿರುದ್ಧ ಜಯ ಸಾಧಿಸಿತು.

    ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ಟೆರೇಷಿಯನ್ ಕಾಲೇಜು ತಂಡ 5-0 ಗೋಲುಗಳಿಂದ ಜೆಎಸ್‌ಎಸ್ ಕಾಲೇಜು ವಿರುದ್ಧ ಹಾಗೂ ಎಸ್‌ಬಿಆರ್‌ಆರ್ ಮಹಾಜನ ಕಾಲೇಜು ತಂಡ 3-2 ಗೋಲುಗಳಿಂದ ನಾಗಮಂಗಲದ ಬಿಜಿಎಸ್ ಕಾಲೇಜು ವಿರುದ್ಧ ಜಯ ಸಾಧಿಸಿದ್ದವು.

    ಇದಕ್ಕೂ ಮುನ್ನ ಪಂದ್ಯಾವಳಿಗೆ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಚಾಲನೆ ನೀಡಿದರು.ನಂತರ ಅವರು ಮಾತನಾಡಿ, ರಾಷ್ಟ್ರೀಯ ಕ್ರೀಡೆಯಾದ ಹಾಕಿಯಲ್ಲಿ ಪಿ. ಧ್ಯಾನ್‌ಚಂದ್ ಅವರ ಹೆಸರು ಅಜರಾಮರ. ರಾಷ್ಟ್ರೀಯ ಹಾಕಿಗೆ ಕೊಡಗಿನ ಕೊಡುಗೆ ಅಪಾರ. ಪ್ರಸ್ತುತ ಪುರುಷ ಹಾಗೂ ಮಹಿಳಾ ಹಾಕಿಯಲ್ಲಿ ದೇಶದ ಸಾಧನೆ ಉತ್ತಮವಾಗಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts