ಭಯೋತ್ಪಾದಕ ದಾಳಿ; ನ್ಯಾಯಾಂಗ ತನಿಖೆ ಕೋರಿ ಸಲ್ಲಿಸಲಾದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್| Supreme court

Supreme Court
Published on

Terror attack; ಪಹಲ್ಗಾಮ್ ಭಯೋತ್ಪಾದಕ ದಾಳಿಯ ತನಿಖೆಗಾಗಿ ನ್ಯಾಯಾಂಗ ಆಯೋಗವನ್ನು ರಚಿಸಬೇಕು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ. ಸಿಂಗ್ ಅವರ ಪೀಠವು ಅಂತಹ ಮನವಿಗೆ ಇದು ಸರಿಯಾದ ಸಮಯವಲ್ಲ ಎಂದು ಹೇಳಿದೆ.

ನಿವೃತ್ತ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ನಡೆಸಬೇಕೆಂಬ ಮನವಿಗೆ ಪ್ರತಿಕ್ರಿಯಿಸಿದ ಪೀಠ, ನಾವು ವಿವಾದವನ್ನು ಮಾತ್ರ ನಿರ್ಧರಿಸುತ್ತೇವೆ. ಆದೇಶ ಹೊರಡಿಸಲು ನಮ್ಮನ್ನು ಕೇಳಬೇಡಿ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ಇನ್ನೂ ಪ್ರತಿಯೊಬ್ಬ ಭಾರತೀಯರೂ ಭಯೋತ್ಪಾದನೆಯ ವಿರುದ್ಧ ಹೋರಾಡಲು ಕೈಜೋಡಿಸುವ ನಿರ್ಣಾಯಕ ಸಮಯ ಇದಾಗಿದೆ ಎಂದು ಪೀಠವು ಹೇಳಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net