ರಾಜ್ಯದಲ್ಲಿ ಭಯೋತ್ಪಾದಕರ ದಾಳಿ ಭೀತಿ: ನಂದಿಗಿರಿಧಾಮದಲ್ಲಿ ಹೈಆಲರ್ಟ್​

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಭಯೋತ್ಪಾಕ ದಾಳಿಯ ಭೀತಿಯನ್ನು ರಾಷ್ಟ್ರ ಮತ್ತು ರಾಜ್ಯ ಎದುರಿಸುತ್ತಿದೆ. ಈ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈಆಲರ್ಟ್​ ಘೋಷಣೆ ಮಾಡಲಾಗಿದೆ.

ವಿಶ್ವ ಪ್ರಸಿದ್ಧ ತಾಣಗಳ ಮೇಲೆ ಜಿಲ್ಲಾಡಳಿತ ನಿಗಾವಹಿಸಿ ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಿದೆ. ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ನಂದಿ ಗಿರಿಧಾಮದಲ್ಲಿ 36 ಸಿಸಿ ಕ್ಯಾಮೆರ ಮತ್ತು ಬಿಗಿ ಪೋಲಿಸ್​ ಭದ್ರತೆ ಅಳವಡಿಸಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಮತ್ತು ವಸ್ತುಗಳ ತಪಾಸಣೆ ಮಾಡಲಾಗುತ್ತಿದೆ. ನಂದಿ ಗ್ರಾಮದ ಐತಿಹಾಸಿಕ ಭೋಗನಂಧೀಶ್ವರ ದೇವಾಲಯದಲ್ಲಿ 16 ಸಿಸಿಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ್​​ ಶ್ರವಣ್​​​ ತಿಳಿಸಿದ್ದಾರೆ.

ಯಾವುದೇ ಅನುಮಾನಾಸ್ಪದ ವ್ಯಕ್ತಿ ಮತ್ತು ವಸ್ತು ಕಂಡು ಬಂದರೆ ಯಾವುದೇ ಭಯಭೀತಿ ಇಲ್ಲದೆ ದೂರವಾಣಿ ಸಂಖ್ಯೆ 100ಕ್ಕೆ ಕರೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ. (ದಿಗ್ವಿಜಯ ನ್ಯೂಸ್​)