More

    ಕಾಶ್ಮೀರದ ಬಾರಾಮುಲ್ಲಾದ ಸಿಆರ್​ಪಿಎಫ್​ ಯೋಧರಿದ್ದ ವಾಹನದ ಮೇಲೆ ಉಗ್ರರ ದಾಳಿ, ಮೂವರು ಯೋಧರು ಹುತಾತ್ಮ

    ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್​ ಬಳಿ ಸಿಆರ್​ಪಿಎಫ್​ ಯೋಧರಿದ್ದ ವಾಹನದ ಮೇಲೆ ಉಗ್ರರು ಶನಿವಾರ ಸಂಜೆ ದಾಳಿ ನಡೆಸಿದ್ದಾರೆ. ಮೂವರು ಯೋಧರು ಹುತಾತ್ಮರಾಗಿದ್ದಾರೆ.

    ಇಬ್ಬರು ಅಥವಾ ಮೂವರು ಉಗ್ರರು ಇದ್ದ ತಂಡ ಯೋಧರಿದ್ದ ವಾಹನದ ಮೇಲೆ ಹಠಾತ್ತನೆ ದಾಳಿ ನಡೆಸಿತು ಎನ್ನಲಾಗಿದೆ. ಶುಕ್ರವಾರ ಸಂಜೆಯಿಂದ ಸಿಆರ್​ಪಿಎಫ್​ ಯೋಧರ ಮೇಲೆ ಉಗ್ರರು ನಡೆಸಿರುವ ಎರಡನೇ ದಾಳಿ ಇದಾಗಿದೆ.

    ಸದ್ಯಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಲಾಗಿದೆ. ಆ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

    ಲಾಕ್​ಡೌನ್​ನಿಂದ ತೀವ್ರ ಸಂಕಷ್ಟದಲ್ಲಿ ದುಬೈ ಕನ್ನಡಿಗರು, ಗೃಹ ಸಚಿವ ಬೊಮ್ಮಾಯಿ ಕೊಟ್ಟ ಅಭಯವೇನು?

    ಹಲವು ಸನ್ಮಾನಗಳಿಗೆ ಪಾತ್ರನಾಗಿದ್ದ ಈ ‘ವೀರ ಯೋಧ’ ಈಗ ಜೈಲು ಸೇರಿದ್ದಾನೆ… ಯಾಕೆ ಅಂತೀರಾ? ಈ ಸ್ಟೋರಿ ಓದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts