

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಬಳಿ ಸಿಆರ್ಪಿಎಫ್ ಯೋಧರಿದ್ದ ವಾಹನದ ಮೇಲೆ ಉಗ್ರರು ಶನಿವಾರ ಸಂಜೆ ದಾಳಿ ನಡೆಸಿದ್ದಾರೆ. ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಇಬ್ಬರು ಅಥವಾ ಮೂವರು ಉಗ್ರರು ಇದ್ದ ತಂಡ ಯೋಧರಿದ್ದ ವಾಹನದ ಮೇಲೆ ಹಠಾತ್ತನೆ ದಾಳಿ ನಡೆಸಿತು ಎನ್ನಲಾಗಿದೆ. ಶುಕ್ರವಾರ ಸಂಜೆಯಿಂದ ಸಿಆರ್ಪಿಎಫ್ ಯೋಧರ ಮೇಲೆ ಉಗ್ರರು ನಡೆಸಿರುವ ಎರಡನೇ ದಾಳಿ ಇದಾಗಿದೆ.
ಸದ್ಯಕ್ಕೆ ಹೆಚ್ಚುವರಿ ಸೇನಾ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಲಾಗಿದೆ. ಆ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರಿಗಾಗಿ ಶೋಧ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.