ಪುಲ್ವಾಮಾದಲ್ಲಿ ಎನ್‌ಕೌಂಟರ್ : ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

security forces
Published on

ಜಮ್ಮು ಕಾಶ್ಮೀರ: ಪುಲ್ವಾಮಾದಲ್ಲಿ ಮೊನ್ನೆಯಷ್ಟೇ ಉಗ್ರರ ದಾಳಿ ನಡೆದಿದ್ದು, ಓರ್ವ ಕಾಶ್ಮೀರಿ ಪಂಡಿತರು ಮೃತಪಟ್ಟಿದ್ದರು. ಇದೆ ಬೆನ್ನಲ್ಲೇ ಇಂದು ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾ ಪ್ರದೇಶದಲ್ಲಿ ಭಾರತೀಯ ಸೇನೆ ಸೇನೆಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ.

ಪುಲ್ವಾಮಾದ ಪಡ್ಗಂಪುರ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಓರ್ವ ಭಯೋತ್ಪಾದಕನನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ಇಂದು ಬೆಳಿಗ್ಗೆ ಈ ಎನ್​ಕೌಂಟರ್​ ನಡೆದಿದೆ. ಆದರೆ ಉಗ್ರನ , ಮೃತದೇಹ ಇನ್ನೂ ಪತ್ತೆಯಾಗಿಲ್ಲ. ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆ ಇದಾಗಿದೆ. ಇದೇ ಸ್ಥಳದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ಕೊಟ್ಟಿದ್ದಾರೆ.

ಭಾನುವಾರ ಮುಂಜಾನೆ ಕಾಶ್ಮೀರಿ ಪಂಡಿತ್ (ಸಂಜಯ್ ಶರ್ಮಾ) ಪುಲ್ವಾಮಾ ಜಿಲ್ಲೆಯ ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net