ಕಾರ್ಯಾಚರಣೆ ವೇಳೆ ಗುಂಡಿನ ದಾಳಿ; ಭಯೋತ್ಪಾದಕನನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

TRF terrorist
Published on

ಶ್ರೀನಗರ: ನಿಷೇಧಿತ ಭಯೋತ್ಪಾದನೆ ಸಂಘಟನೆಯಾದ ದಿ ರೆಸಿಸ್ಟೆನ್ಸ್​ ಫ್ರಂಟ್ (TRF) ಸೇಇದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಗುರುವಾರ ಮುಂಜಾನೆ ಹೊಡೆದುರುಳಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್​ ಜಿಲ್ಲೆಯ ಕಥೋಹಾಲನ್​ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದ್ದಾರೆ.

ಭದ್ರತಾ ಪಡೆಗಳು ಕಥೋಹಾಲನ್​ ಪ್ರದೇಶದಲ್ಲಿ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆ ಗುಂಡಿನ ಕಾಳಗ ಶುರುವಾಗಿದ್ದು, ಓರ್ವನನ್ನು ಸೆದೆ ಬಡಿದಿದ್ದಾರೆ. ಇನ್ನುಳಿದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಮಾಡಿರುವ ಕಾಶ್ಮೀರ ಪೊಲೀಸರು, ನಿಷೇಧಿತ ಭಯೋತ್ಪಾದಕ ಸಂಘಟನೆ ಜತೆ ಗುರುತಿಸಿಕೊಂಡಿದ್ದ ಓರ್ವನನ್ನು ಕಾರ್ಯಾಚರಣೆ ವೇಳೆ ಎನ್​ಕೌಂಟರ್​ ಮಾಡಲಾಗಿದೆ. ಮೃತನ ಬಳಿ ಇದ್ದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಅಡಗಿರುವವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net