ಇಸ್ಲಾಮಾಬಾದ್: ನೈಋತ್ಯ ಪಾಕಿಸ್ತಾನದಲ್ಲಿ(Pakistan) ಮಂಗಳವಾರ(ಮಾರ್ಚ್ 11) ಪ್ರತ್ಯೇಕತಾವಾದಿ ಉಗ್ರರು ಪ್ರಯಾಣಿಕ ರೈಲಿನ ಮೇಲೆ ಗುಂಡು ಹಾರಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ರೈಲು ಚಾಲಕ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಇದನ್ನು ಓದಿ: ಪಾಕ್ ರಾಯಭಾರಿಗೆ ಭಾರೀ ಅವಮಾನ; ಅಮೆರಿಕ ಪ್ರವೇಶಕ್ಕೆ ನಿರಾಕರಣೆ.. ಲಾಸ್ ಏಂಜಲೀಸ್ನಿಂದ ಗಡಿಪಾರು | Pakistan Diplomat
ಪಾಕಿಸ್ತಾನದ ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಿಂದ ಖೈಬರ್ ಪಖ್ತುಂಖ್ವಾದ ಪೇಶಾವರಕ್ಕೆ ರೈಲು ಪ್ರಯಾಣಿಸುತ್ತಿದ್ದಾಗ ಅದರ ಮೇಲೆ ಗುಂಡು ಹಾರಿಸಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಎಂಬ ಉಗ್ರಗಾಮಿ ಪ್ರತ್ಯೇಕತಾವಾದಿ ಗುಂಪು ದಾಳಿಯ ಹೊಣೆಯನ್ನು ಹೊತ್ತುಕೊಂಡಿದ್ದು, ಭದ್ರತಾ ಪಡೆಗಳು ಸೇರಿದಂತೆ ರೈಲಿನಲ್ಲಿದ್ದ ಜನರನ್ನು ಒತ್ತೆಯಾಳಾಗಿ ಇರಿಸಿಕೊಂಡಿರುವುದಾಗಿ ಅಧಿಕಾರಿಗಳು ನೀಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳನ್ನು ಕಳುಹಿಸಲಾಗಿದ್ದು, ದಾಳಿಯ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಬಲೂಚಿಸ್ತಾನದ ಸುರಂಗ 8ರಲ್ಲಿ ಜಾಫರ್ ಎಕ್ಸ್‌ಪ್ರೆಸ್ ಹೆಸರಿನ ಈ ರೈಲನ್ನು ಶಸ್ತ್ರಸಜ್ಜಿತ ವ್ಯಕ್ತಿಗಳು ತಡೆದಿದ್ದಾರೆ. ಬಲೂಚಿಸ್ತಾನದಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ದೀರ್ಘಕಾಲದಿಂದ ಹೋರಾಡುತ್ತಿರುವ ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್‌ಎ) ರೈಲು ಅಪಹರಣದ ನಂತರ ಹೇಳಿಕೆಯಲ್ಲಿ, ರೈಲಿನ ನಿಯಂತ್ರಣವನ್ನು ತೆಗೆದುಕೊಳ್ಳಲು ನಡೆದ ಘರ್ಷಣೆಯಲ್ಲಿ ಆರು ಪಾಕಿಸ್ತಾನದ ಭದ್ರತಾ ಸಿಬ್ಬಂದಿ ಮೃತಪಟ್ಟಿರುವುದಾಗಿ. ಮತ್ತು ಒತ್ತೆಯಾಳುಗಳಲ್ಲಿ ಪಾಕಿಸ್ತಾನಿ ಸೇನಾ ಸಿಬ್ಬಂದಿ ಮತ್ತು ಭದ್ರತಾ ಸಂಸ್ಥೆಗಳ ಸದಸ್ಯರು ಸೇರಿದ್ದಾರೆ ಎಂದು ಹೇಳಿದ್ದಾರೆ.
ಅವರ ಬೇಡಿಕೆಗಳನ್ನು ಈಡೇರಿಸದಿದ್ದರೆ ಅವರಿಗೆ ಹಾನಿಯಾಗಬಹುದು. ರೈಲಿನಲ್ಲಿ ಮಹಿಳೆಯರು, ಮಕ್ಕಳು ಮತ್ತು ಬಲೂಚ್ ಪ್ರಯಾಣಿಕರನ್ನು ಬಿಡುಗಡೆ ಮಾಡಿರುವುದಾಗಿ ಎಂದು ಬಿಎಲ್‌ಎ ಹೇಳಿದೆ. ಎಲ್ಲಾ ಒತ್ತೆಯಾಳುಗಳು ಪಾಕಿಸ್ತಾನಿ ಸೇನೆಯಿಂದ ಬಂದವರು ಎಂದು ಅವರು ಖಚಿತಪಡಿಸಿಕೊಂಡಿದ್ದಾರೆ. ವಿದೇಶಿಯರನ್ನು ಒತ್ತೆಯಾಳುಗಳನ್ನಾಗಿ ಮಾಡುವ ಉದ್ದೇಶ ನನಗಿಲ್ಲ ಎಂದು ಅವರು ತಿಳಿಸಿದ್ದಾರೆ.(ಏಜೆನ್ಸೀಸ್)
ಮಾಸ್ಕೋ ಮೇಲೆ ಯುಕ್ರೇನ್ನಿಂದ ಡ್ರೋನ್ ದಾಳಿ; ಓರ್ವ ಸಾವು, ಮೂವರಿಗೆ ಗಾಯ | Ukraine