ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ: ಓರ್ವ ಸಾವು, ಹಲವರಿಗೆ ಗಾಯ | tourists attacked

tourists attacked
Published on

Tourists Attacked : ಜಮ್ಮು-ಕಾಶ್ಮೀರಾದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಓರ್ವ ಸಾವು, 7 ಜನರು ಗಾಯಗೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಪಹಲ್ಗಾಮ್‌ನ ಬೈಸರನ್ ಪರ್ವತದ ತುದಿಯಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ಹಿನ್ನೆಲೆ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪರಿಚಿತ ಬಂದೂಕುಧಾರಿಗಳು ಚಾರಣ ಪ್ರವಾಸಕ್ಕೆ ಹೋಗಿದ್ದ ಪ್ರವಾಸಿಗರ ಮೇಲೆ ಮಂಗಳವಾರ (ಏ.22) ಮಧ್ಯಾಹ್ನ 2:30ಕ್ಕೆ ದಾಳಿ ನಡೆದಿದೆ ಎಂದು ಪೊಲೀಸ್​​ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸದ್ಯಕ್ಕೆ ಪಹಲ್ಗಾಂನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಭದ್ರತಾ ಪಡೆಗಳು ದಾಳಿ ನಡೆಸಲಾದ ಪ್ರದೇಶವನ್ನು ಸಂಪೂರ್ಣವಾಗಿ ಸುತ್ತುವರೆದಿವೆ.

ಕಾಲ್ನಡಿಗೆಯಲ್ಲಿ ಅಥವಾ ಕುದುರೆಗಳ ಮೂಲಕ ಮಾತ್ರ ತಲುಪಬಹುದಾದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಗುಂಡಿನ ಸದ್ದು ಕೇಳಿ ಬಂದ ನಂತರ ಭದ್ರತಾ ಪಡೆಗಳು ಧಾವಿಸಿದ್ದಾರೆ ಎಂದು ಪೊಲೀಸ್​​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗುಂಡಿನ ದಾಳಿಗೆ ಗಾಯಗೊಂಡಿರುವ ಪ್ರವಾಸಿಗರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗಿದೆ. (ಏಜೆನ್ಸೀಸ್​).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net