ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು!

ಬನಸ್ಕಾಂತ: ಪ್ರಸ್ತುತ ದಿನಗಳಲ್ಲಿ ಮೊಬೈಲ್​​ ಪೋನ್​​ ಬಳಕೆ ಮಾಡದೇ ಅರೇಕ್ಷಣ ಇರಲು ಸಾಧ್ಯವಾಗದ ಪರಿಸ್ಥಿತಿಗೆ ಸಮಾಜ ತಲುಪಿದೆ. ಆದರೆ ಇಲ್ಲೊಂದು ಸಮುದಾಯ ಮದುವೆಯಾಗದ ಯುವತಿಯರು ಮೊಬೈಲ್ ಬಳಕೆ ಮಾಡದಂತೆ ನೂತನ ಕಾನೂನು ಜಾರಿಗೆ ಮಾಡಿದೆ.

ಗುಜರಾತ್​ನ ಬನಸ್ಕಾಂತ ಜಿಲ್ಲೆಯ ಠಾಕೂರ್​​ ಸಮುದಾಯದಲ್ಲಿ ಯುವತಿಯರು ಮೊಬೈಲ್​​ ಪೋನ್​​ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು.

ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ.

ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ, 1.5 ರಿಂದ 2 ಲಕ್ಷವರೆಗೆ ದಂಡ ವಿಧಿಸಲಾಗುವುದು ಎಂದು ಹೊಸ ಕಾನೂನು ಜಾರಿಯಾಗಿದೆ.

ಯುವತಿಯರು ಮೊಬೈಲ್​​ನಲ್ಲಿ ಅಗನತ್ಯ ವಿಡಿಯೋಗಳನ್ನು ನೋಡುವ ಮೂಲಕ ಸಮಯ ವ್ಯರ್ಥ ಮಾಡಬಾರದೆಂದು ಹಾಗೂ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಗನಿಬೇನ್​​​ ಠಾಕೂರ್​​ ತಿಳಿಸಿದ್ದಾರೆ. (ಏಜೆನ್ಸೀಸ್​)

One Reply to “ಮದುವೆಗೂ ಮುನ್ನ ಯುವತಿಯರು ಮೊಬೈಲ್​​​​ ಬಳಕೆ ಮಾಡಿದರೆ ಪಾಲಕರಿಗೆ ದಂಡ ವಿಧಿಸಲಾಗುವುದು!”

Leave a Reply

Your email address will not be published. Required fields are marked *