More

    ದಾಖಲೆ ಪತ್ರ ಇಲ್ಲದ 7.9 ಲಕ್ಷ ರೂ. ವಶ

    ಮಂಗಳೂರು: ದಾಖಲೆ ಪತ್ರ ರಹಿತವಾಗಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 7.9 ಲಕ್ಷ ರೂ. ನಗದು ಮೊತ್ತವನ್ನು ತಲಪಾಡಿ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದಾರೆ.


    ಕಾಸರಗೋಡಿನಿಂದ ಮಂಗಳೂರಿಗೆ ಕಾರಿನಲ್ಲಿ ಈ ಮೊತ್ತವನ್ನು ಸಾಗಾಟ ಮಾಡಲಾಗುತ್ತಿತ್ತು. ಕಾರನ್ನು ಚೆಕ್‌ಪೋಸ್ಟ್‌ನಲ್ಲಿ ತಡೆದು ತಪಾಸಣೆ ನಡೆಸಿದಾಗ 7.9 ಲಕ್ಷ ರೂ. ನಗದು ಪತ್ತೆಯಾಗಿದೆ. ಈ ಬಗ್ಗೆ ಕಾರಿನಲ್ಲಿ ಇದ್ದವರನ್ನು ಅಧಿಕಾರಿಗಳು ಪ್ರಶ್ನಿಸಿದಾಗ, ಮಂಗಳೂರಿನ ಬಂದರಿಗೆ ಸಾಮಗ್ರಿ ಖರೀದಿಗೆ ಆಗಮಿಸುತ್ತಿರುವುದಾಗಿ ತಿಳಿಸಿದ್ದಾರೆ. ಆದರೆ ಸೂಕ್ತ ದಾಖಲೆಪತ್ರ ಇಲ್ಲದ ಕಾರಣ ಮೊತ್ತವನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts