More

    ಅಗ್ನಿ ಅವಘಡದಿಂದ 13 ಕೋವಿಡ್ ರೋಗಿಗಳು ಸತ್ತರೂ ಅದೇನು ರಾಷ್ಟ್ರೀಯ ಸುದ್ದಿಯಲ್ಲ ಬಿಡಿ ಎಂದ ಮಹಾ ಆರೋಗ್ಯ ಸಚಿವ!

    ಮುಂಬೈ: ಮಹಾರಾಷ್ಟ್ರದ ಪಲ್ಘಾರ್​ ಜಿಲ್ಲೆಯ ವಾಸೈನಲ್ಲಿರುವ ಕೋವಿಡ್​ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಆಕಸ್ಮಿಕವಾಗಿ ಸಂಭವಿಸಿದ ಅಗ್ನಿ ಅವಘಡದಲ್ಲಿ 13 ಜನ ಕೋವಿಡ್ ಸೋಂಕಿತರು ಸಜೀವ ದಹನವಾಗಿದ್ದಾರೆ. ಆದರೆ, ಈ ಘಟನೆ ಬಗ್ಗೆ ಮಹಾರಾಷ್ಟ್ರ ಆರೋಗ್ಯ ಸಚಿವ ಉಡಾಫೆಯಾಗಿ ಮಾತನಾಡಿದ್ದಾರೆ.

    ವಿಜಯ್ ವಲ್ಲಭ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡ ಅದೇನು ರಾಷ್ಟ್ರೀಯ ಸುದ್ದಿಯಲ್ಲ. ನಾವೆಲ್ಲ ನೋಡಿಕೊಳ್ಳುತ್ತೇವೆ ಬಿಡಿ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪೆ ಮಾಧ್ಯಮಗಳ ಎದುರು ಹೇಳಿದ್ದಾರೆ. ಟೋಪೆ ಅವರ ಈ ಹೇಳಿಕೆ ಕುರಿತು ಮಹಾರಾಷ್ಟ್ರದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    ಈಗಾಗಲೇ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದೇವೆ. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟೋಪೆ ಹೇಳಿದ್ದಾರೆ. ಘಟನೆಯಲ್ಲಿ ಮೃತಪಟ್ಟವರಿಗೆ ಐದು ಲಕ್ಷ ರೂ ಪರಿಹಾರ ಘೋಷಿಸಲಾಗಿತ್ತು. ಇದೀಗ ಮತ್ತೆ ಐದು ಲಕ್ಷ ರೂಪಾಯಿ ಹೆಚ್ಚುವರಿ ಪರಿಹಾರವನ್ನು ಘೋಷಿಸಲಾಗಿದೆ.

    ಫಾಲ್ಗಾರ್ ಜಿಲ್ಲೆಯ ವಾಸೈ ವಿರಾರ್ ಮುನ್ಸಿಪಲ್ ಕಾರ್ಪೊರೇಶನ್​ನ ಕರೋನಾ ನಿಯಂತ್ರಣ ಕೊಠಡಿಯಲ್ಲಿ ಶುಕ್ರವಾರ ಬೆಳಿಗ್ಗೆ ದುರ್ಘಟನೆ ಸಂಭವಿಸಿತ್ತು. ವಿರಾರ್ ಪಶ್ಚಿಮದಲ್ಲಿರುವ ವಿಜಯ್ ವಲ್ಲಭ್ ಆಸ್ಪತ್ರೆಯಲ್ಲಿ 15 ರೋಗಿಗಳು ಐಸಿಯುನಲ್ಲಿದ್ದರು. ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ. ಎಸಿ ಶಾರ್ಟ್​ ಸೆರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂದು ಹೇಳಲಾಗಿದೆ.

    ಮದುವೆ ನಿಶ್ಚಯ ಮಾಡಿ ಹಿಂತಿರುಗುತ್ತಿದ್ದರು… ಸೇತುವೆ ದಾಟುವಾಗ ನಡೆಯಿತು ದುರಂತ !

    ಕೋವಿಡ್​ ಕೇಂದ್ರದಲ್ಲಿ ಅಗ್ನಿ ಅವಘಡ: 13 ಸೋಂಕಿತರು ಸಜೀವ ದಹನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts