More

    ಹೋರಾಟನಿರತ ರೈತರತ್ತ ವಾಲಿದ ಕೇಂದ್ರ ಸರ್ಕಾರ! ನಾಲ್ಕರಲ್ಲಿ ಎರಡು ಬೇಡಿಕೆಗೆ ಒಪ್ಪಿಗೆ

    ನವದೆಹಲಿ: ಕೃಷಿ ಕಾಯ್ದೆಯ ಬಗ್ಗೆ ದೇಶಾದ್ಯಂತ ರೈತಾಕ್ರೋಶ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ರೈತರೊಂದಿಗೆ ಸಭೆ ನಡೆಸಿದೆ. ಏಳನೇ ಸುತ್ತಿನ ಸಭೆಯಲ್ಲಿ ರೈತರು ನಾಲ್ಕು ಬೇಡಿಕೆಗಳನ್ನು ಇಟ್ಟಿದ್ದು, ಅದರಲ್ಲಿ ಎರಡು ಬೇಡಿಕೆಗಳಿಗೆ ಕೇಂದ್ರ ಒಪ್ಪಿಗೆ ನೀಡಿದೆ. ಜನವರಿ 4ರಂದು ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.

    ಇದನ್ನೂ ಓದಿ: ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

    ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ವಾಣಿಜ್ಯ ರಾಜ್ಯ ಸಚಿವ ಸೋಮ್ ಪ್ರಕಾಶ್ ಅವರು 41 ರೈತ ಸಂಘಗಳ ಪ್ರತಿನಿಧಿಗಳೊಂದಿಗೆ ಇಂದು ಮಾತುಕತೆ ನಡೆಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಸಲಾಗಿದೆ. ಮಾತುಕತೆಯಲ್ಲಿ ರೈತರು ನಾಲ್ಕು ಪ್ರಸ್ತಾಪಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಅದರಲ್ಲಿ ಎರಡಕ್ಕೆ ಒಪ್ಪಿಗೆ ನೀಡಲಾಗಿದೆ. ಕಾಯ್ದೆಗಳನ್ನು ಹಿಂಪಡೆಯುವ ಬಗ್ಗೆ ಮತ್ತು ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಜನವರಿ 4ರಂದು ಸಭೆ ನಡೆಸಿ ಚರ್ಚಿಸಲಾಗುವುದು ಎನ್ನಲಾಗಿದೆ.

    ಇದನ್ನೂ ಓದಿ: ಡಿಫರೆಂಟ್​ ಸೆಕ್ಸ್​ ಪೊಸಿಷನ್​ಗೆ ಒಪ್ಪದ ಹೆಂಡತಿಯ ಮೇಲೆ ಹಲ್ಲೆ ನಡೆಸಿದ ಗಂಡ! ಪೊಲೀಸರ ಮೊರೆ ಹೋದ ಹೆಂಡತಿ!

    ಇಂದಿನ ಸಂಭಾಷಣೆ ಚೆನ್ನಾಗಿತ್ತು ಉತ್ತಮವಾಗಿತ್ತು. ಮುಂದಿನ ಸಂವಾದ ಜನವರಿ 4 ರಂದು ನಡೆಯಲಿದ್ದು, ಅಲ್ಲಿಯವರೆಗೆ ರೈತರ ಶಾಂತಿಯುತವಾಗಿ ಹೋರಾಟ ಮುಂದುವರಿಸಲಿದ್ದಾರೆ ಎಂದು ರೈತ ಮುಖಂಡ ರಾಕೇಶ್ ಟಿಕೈಟ್ ಹೇಳಿದ್ದಾರೆ. (ಏಜೆನ್ಸೀಸ್​)

    ಸರ್ಪೈಸ್​ ನೀಡಲು ಮನೆಗೆ ಬಂದ ಗಂಡನಿಗೆ ಕಾದಿತ್ತು ಬಿಗ್​ ಶಾಕ್​! ಹೆಂಡತಿಯ ಇನ್ನೊಂದು ರೂಪ ನೋಡಿದ ಗಂಡ ಮಾಡಿದ್ದೇನು?

    ಹೆಂಡತಿಯ ಸೀಮಂತಕ್ಕೆ ಸಿದ್ಧತೆ ನಡೆಸುತ್ತಿದ್ದ ಗಂಡ ರಸ್ತೆಯಲ್ಲೇ ಬಲಿಯಾದ! ಮಗನ ಜತೆ ತಾಯಿಯೂ ದುರ್ಮರಣ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts