ಐತಾಳರ ಸಾಧನೆ ಮುಂದಿನ ಪೀಳಿಗೆಗೆ ದಾರಿದೀಪ

blank

ಕೋಟ: ಪಾರಂಪಳ್ಳಿ ನರಸಿಂಹ ಐತಾಳರು ಸಾಹಿತ್ಯ, ಸಂಗೀತ, ನೃತ್ಯ, ಸಂಟನೆ, ರಂಗಭೂಮಿ, ಶಿಕ್ಷಣ, ಸಾಂಸ್ಕೃತಿಕ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿದವರು. ಐತಾಳರ ಸಾಧನೆ ಅನನ್ಯವಾದುದು, ಇಂದಿನ ಯುವ ಸಮೂಹಕ್ಕೆ ದಾರಿದೀಪವಾಗಿದೆ ಎಂದು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು.

blank

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಕೋಟ ಮಿತ್ರ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕೋಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಹುಟ್ಟೂರು ಸಾಧಕ ಶ್ರೀ ಪ್ರಶಸ್ತಿ ಸವಾರಂಭದಲ್ಲಿ ವಾತನಾಡಿದರು.

ಪಾರಂಪಳ್ಳಿ ನರಸಿಂಹ ಐತಾಳ ಅವರಿಗೆ ಹುಟ್ಟೂರು ಸಾಧಕ ಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು. ಐತಾಳರ ಬದುಕು ಬರಹ ಕೃತಿಗಳ ಕುರಿತು ಕಸಾಪ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಕವಯಿತ್ರಿ ಸುಮನಾ ಹೇರ್ಳೆ, ನಿವೃತ್ತ ಮುಖ್ಯ ಶಿಕ್ಷಕ ಶ್ರೀಪತಿ ಹೇರ್ಳೆ, ಕೋಟ ವಿದ್ಯಾಸಂಸ್ಥೆ ಸಹಕಾರ್ಯದರ್ಶಿ ಪಿ.ಮಂಜುನಾಥ ಉಪಾಧ್ಯ ವಾತನಾಡಿದರು.

ಮಿತ್ರ ಮಂಡಳಿಯ ಗಿಳಿಯಾರು ಶ್ರೀನಿವಾಸ ಅಡಿಗ ಅಭಿನಂದನಾ ಭಾಷಣ ವಾಡಿದರು. ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ, ಕಸಾಪ ಜಿಲ್ಲಾ ಗೌರವ ಕೋಶಾಧ್ಯಕ್ಷ ಮನೋಹರ ಪಿ., ಮಿತ್ರ ಮಂಡಳಿಯ ರಂಗಪ್ಪಯ್ಯ ಹೊಳ್ಳ, ಶ್ರೀನಿವಾಸ ಉಪಾಧ್ಯ, ಶ್ರೀದೇವಿ ಹಂದೆ, ವಿಜಯಲಕ್ಷ್ಮೀ, ಮುಖ್ಯ ಶಿಕ್ಷಕ ನಾಗೇಶ ಮಯ್ಯ, ಪಾರಂಪಳ್ಳಿ ನರಸಿಂಹ ಐತಾಳರ ಅಭಿವಾನಿಗಳು, ಕಸಾಪ ಉಡುಪಿ ಜಿಲ್ಲೆ, ಮಿತ್ರ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.  ಮಿತ್ರ ಮಂಡಳಿ ಅಧ್ಯಕ್ಷ ಉಪೇಂದ್ರ ಸೋಮಯಾಜಿ ಸ್ವಾಗತಿಸಿದರು. ಶ್ರೀದೇವಿ ಹಂದೆ ಪ್ರಾರ್ಥಿಸಿದರು. ಬ್ರಹ್ಮಾವರ ತಾಲೂಕು ಕಸಾಪ ಅಧ್ಯಕ್ಷ ಗುಂಡ್ಮಿ ರಾಮಚಂದ್ರ ಐತಾಳ ನಿರೂಪಿಸಿ, ವಂದಿಸಿದರು.

ಶಂಕರರು ಅದ್ವೈತ ಸಿದ್ಧಾಂತ ಸ್ಥಾಪಿಸಿದ ಸಾಧನಾ ಮೂರ್ತಿ

‘ಕಲಾಯತನ’ ಸಾಹಿತ್ಯ ಸಮ್ಮೇಳನ ಮೇ 17ರಂದು

 

Share This Article
blank

ಮಳೆಗಾಲದಲ್ಲಿ ಕಲುಷಿತ ಆಹಾರ, ನೀರಿನ ಮೂಲಕ ವೈರಸ್! ಎಚ್ಚರ ತಪ್ಪಿದರೆ ಅನಾರೋಗ್ಯ…monsoon

monsoon : ಮಳೆಗಾಲ  ಹವಾಮಾನದಲ್ಲಿನ ಬದಲಾವಣೆಗಳು  ಅನೇಕ ಆರೋಗ್ಯ ಸಮಸ್ಯೆಗಳನ್ನು ಉಂಟುಮಾಡುತ್ತದೆ.  ಸೇವಿಸುವ ಆಹಾರ ಮತ್ತು…

ಸಕ್ಕರೆ ಪುಡಿಗೆ ಇದೊಂದನ್ನು ಮಿಕ್ಸ್​ ಮಾಡಿ ಇಟ್ಟರೆ ಸಾಕು ಇರುವೆಗಳು ನಿಮ್ಮ ಹತ್ತಿರವೂ ಸುಳಿಯುವುದಿಲ್ಲ! Ants

Ants : ಮನೆಯಲ್ಲಿ ಇರುವೆಗಳ ಕಾಟದ ಕಿರಿಕಿರಿ ಅನುಭವಿಸದವರೇ ಇಲ್ಲ. ಮನೆ ಎಂದ ಮೇಲೆ ಇರುವೆಗಳು…

blank