More

    ಕಾಂತರಾಜು ಆಯೋಗದ ವರದಿಗೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವಿರೋಧ

    ಬೆಂಗಳೂರು: ಕಾಂತರಾಜು ಆಯೋಗದ ಅಂತಿಮ ವರದಿಯನ್ನು ಗುರುವಾರ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ ಹೆಗ್ಡೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕೃತವಾಗಿ ಸಲ್ಲಿಸಿದ್ದು, ಈ ವರದಿಯ ಬಗ್ಗೆ ಈಗಾಗಲೇ ಹಲವು ಅನುಮಾನಗಳಿರುವ ಹಿನ್ನೆಲೆಯಲ್ಲಿ ಈ ವರದಿಯನ್ನು ಸರ್ಕಾರ ಅಂಗೀಕರಿಸಬಾರದು ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ (ಅಭಾವೀಮ )ಒತ್ತಾಯಿಸಿದೆ.

    ಮೊದಲಿಗೆ ಜಾತಿಗಣತಿ ಸಮೀಕ್ಷೆಯ ಉದ್ದೇಶದಿಂದಲೇ ಕಾಂತರಾಜು ಆಯೋಗ ರಚಿಸಲಾಯಿತು. ತದನಂತರ ಇದು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಾಗಿ ಬದಲಾಯಿಸಲಾಯಿತು. ಈ ವರದಿ ಸಿದ್ಧವಾಗಿ ಸುಮಾರು 8 ವರ್ಷಗಳಾಗಿದ್ದು, ಈ ಅವಧಿಯಲ್ಲಿ ಜಾತಿವಾರು ಜನಸಂಖ್ಯೆಯಲ್ಲಿ ಸಾಕಷ್ಟು ಏರುಪೇರಾಗಳಾಗಿರುವ ಸಾಧ್ಯತೆ ಇದೆ. ಕೋವಿಡ್ ಪರಿಸ್ಥಿತಿಯ ನಂತರ ಎಲ್ಲ ಕ್ಷೇತ್ರದಲ್ಲೂ ಬದಲಾವಣೆಗಳಾಗಿವೆ. ಆದ್ದರಿಂದ ಸುದೀರ್ಘ ಅವಧಿಯ ನಂತರ ಸಲ್ಲಿಕೆಯಾದ ವರದಿಯಿಂದ ವಾಸ್ತವಾಂಶ ಹೊರಬರಲು ಸಾಧ್ಯವಿಲ್ಲವಾದ್ದರಿಂದ ಈ ವರದಿಯನ್ನು ಅಂಗೀಕರಿಸಬಾರದು ಎಂದು ಅಭಾವೀಮ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದೆ.

    ಹೋರಾಟದ ಎಚ್ಚರಿಕೆ: ಈಗಾಗಲೇ ಕಳೆದ ಡಿಸೆಂಬರ್‌ನಲ್ಲಿ ದಾವಣಗೆರೆಯಲ್ಲಿ ನಡೆದ ಅಭಾವೀಮ ಮಹಾ ಅಧಿವೇಶನದಲ್ಲಿ ವರದಿಯನ್ನು ತಿರಸ್ಕರಿಸುವ ನಿರ್ಣಯವನ್ನು ಕೈಗೊಳ್ಳಲಾಗಿದ್ದು, ಇತರೆ ಸಮುದಾಯಗಳು ಕೂಡಾ ವರದಿ ಬಗ್ಗೆ ವಿರೋಧ ವ್ಯಕ್ತಪಡಿಸಿವೆ. ಪರಿಸ್ಥಿತಿ ಹೀಗಿದ್ದು ರಾಜ್ಯದ ಪ್ರಭಲ ಸಮುದಾಯವಾಗಿರುವ ವೀರಶೈವ ಲಿಂಗಾಯತ ಸಮುದಾಯದ ವಸ್ತುಸ್ತಿತಿಯನ್ನು ಮರೆಮಾಚಿ ಸರ್ಕಾರ ವರದಿಯನ್ನು ಅಂಗೀಕರಿಸಿದರೆ ನಾಡಿನ ಎಲ್ಲ ಮಠಾಧೀಶರ ನೇತೃತ್ವದಲ್ಲಿ ರಾಜ್ಯಾದ್ಯಂತ ಹೋರಾಟ ರೂಪಿಸುವುದು ಅನಿವಾರ್ಯವಾಗಲಿದೆ ಎಂದು ಅಭಾವೀಮ ಕಾರ್ಯದರ್ಶಿ ಎಚ್.ಎಂ.ರೇಣುಕಾ ಪ್ರಸನ್ನ ಎಚ್ಚರಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts