More

    ಅಭಿವೃದ್ಧಿಗೆ ಹಣವಿಲ್ಲ ಆರೋಪ ನಿರಾಧಾರ

    ಚಿಕ್ಕಮಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಹಣವಿಲ್ಲ ಎನ್ನುವ ವಿಪಕ್ಷಗಳ ಆರೋಪ ನಿರಾಧಾರವಾಗಿದ್ದು, ಹಿಂದಿನ ಸರ್ಕಾರ ಮಾಡಿದ ಯಡವಟ್ಟುಗಳಿಂದ ಅಭಿವೃದ್ಧಿ ವೇಗ ಕಡಿಮೆಯಾಗಿತ್ತು. ಇದೀಗ ಎಲ್ಲೆಡೆ ಕಾಮಗಾರಿಗಳು ವೇಗವಾಗಿ ಆರಂಭಗೊಂಡಿವೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
    ನಿಡಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ 85 ಲಕ್ಷ ರೂ. ವೆಚ್ಚದಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಚಿಕ್ಕಮಗಳೂರು-ಸಖರಾಯಪಟ್ಟಣದಿಂದ ಬಾಣಾವರದ ವರೆಗೆ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ ಎಂದು ಹೇಳಿದರು.
    ರಾಜ್ಯಸರ್ಕಾರ ಸಣ್ಣ ನೀರಾವರಿ ಇಲಾಖೆಗೆ 7.30 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಅನುದಾನದಲ್ಲಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಈ ಭಾಗದ ದೊಡ್ಡ ಯೋಜನೆಗಳಾದ ಭದ್ರಾ ಉಪಕಣಿವೆಯಿಂದ ನೀರು ತುಂಬಿಸುವ ಕಾಮಗಾರಿ ಭರದಿಂದ ನಡೆಯುತ್ತಿದ್ದು, 2ನೇ ಹಂತದ ಕಾಮಗಾರಿಗೆ ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
    ದೊರೆತಿರುವ ಅಧಿಕಾರಾವಧಿಯನ್ನು ಜನಸೇವೆಗೆ ಸಂಪೂರ್ಣವಾಗಿ ಮೀಸಲಿಡಲಾಗುವುದು. ಕೆರೆ ತುಂಬಿಸುವ ಯೋಜನೆಗಳ ಜತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಲಾಗುವುದು. ಈ ಭಾಗದ ರೈತರು ಹೆಚ್ಚು ಮಳೆಯಾಶ್ರಿತ ಭೂಮಿ ಹೊಂದಿದ್ದಾರೆ. ಮುಂದಿನ ದಿನಗಳಲ್ಲಿ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೆರೆ ತುಂಬಿಸುವ ಕೆಲಸವನ್ನು ಮಾಡಲಾಗುವುದು ಎಂದು ಹೇಳಿದರು.
    ತಾಪಂ ಮಾಜಿ ಅಧ್ಯಕ್ಷ ಎಂ.ಪಿ.ಉಮೇಶ್, ಸದಸ್ಯರಾದ ರೂಪಾ ಆನಂದ್, ಎ.ಸಿ.ಚಂದ್ರಪ್ಪ, ಮೂರ್ತಿ, ಗ್ರಾಪಂ ಮಾಜಿ ಅಧ್ಯಕ್ಷ ನಂಜುಂಡಪ್ಪ, ಗ್ರಾಮಸ್ಥರಾದ ಸುರೇಶ್, ಕುಮಾರ್, ಸತೀಶ್, ಶ್ರೀಧರ್, ನಾಗಣ್ಣ, ಅಣ್ಣಪ್ಪ, ಪ್ರಕಾಶ್, ಈಶ್ವರಪ್ಪ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts