More

    ಕಾಂಗ್ರೆಸ್​ ಜೊತೆ ಮೈತ್ರಿ ಸರ್ಕಾರ ರಚಿಸಿದ್ದೇ ದೊಡ್ಡ ತಪ್ಪು: ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತ!

    ಬೆಂಗಳೂರು: ಲೋಕಸಭಾ ಚುನಾವಣೆಗಾಗಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಜಿ ಪ್ರಧಾನಿ ದೇವೇಗೌಡ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಮಟ್ಟದಲ್ಲಿ ಆಗಿದೆ. 2018 ರ ಸರ್ಕಾರದ ಅವಧಿಯಲ್ಲಿ ಅದ ಕಹಿ ಅನುಭವ ಹಾಗೂ ಕಳೆದ ಲೋಕಸಭೆ ಚುನಾವಣೆ ವೇಳೆ ತುಮಕೂರಿನಲ್ಲಿ ದೇವೇಗೌಡ ಸೋಲನ್ನು ನಾವು ಮರೆತಿಲ್ಲ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.

    ಇದನ್ನೂ ಓದಿ: ಡಿ.ಕೆ.ಸುರೇಶ್ ವಿರುದ್ಧ ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್?: ಜೆಡಿಎಸ್‌ ಸಭೆಯಲ್ಲಿ ಕುಮಾರಸ್ವಾಮಿ ಹೇಳಿದ್ದೇನು?

    ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸಿದ್ದು ನಾವು ಮಾಡಿದ ಇನ್ನೊಂದು ದೊಡ್ಡ ತಪ್ಪು. ಅದನ್ನು ಸರಿ ಮಾಡಿಕೊಳ್ಳುವ ಕಾಲ ಸನ್ನಿಹಿತವಾಗಿದೆ. ಈ ಚುನಾವಣೆ ನಿರ್ಣಾಯಕ ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

    ಜೆಡಿಎಸ್​ ಉಳಿವಿಗಾಗಿ ದುಡಿಯುತ್ತೇನೆ: ಇನ್ನು 45 ದಿನಗಳ ಕಾಲ ಪಕ್ಷದ ಪರವಾಗಿ ಪ್ರಚಾರ, ಕೆಲಸ ಮಾಡುತ್ತೇನೆ. ಮೈತ್ರಿಕೂಟದ ಪರವಾಗಿ ಕೆಲಸ ಮಾಡುತ್ತೇನೆ. ಒಳ್ಳೆಯ ಫಲಿತಾಂಶ ಬರಲು ಕಾಯಾ ವಾಚಾ ಮನಸಾ ಕೆಲಸ ಮಾಡುತ್ತೇನೆ. ನನಗೆ ಹಾಗೂ ಕುಮಾರಣ್ಣ ಅವರಿಗೆ ಮಂಡ್ಯದಿಂದ ಸ್ಪರ್ಧೆ ಮಾಡುವಂತೆ ಅತೀವ ಒತ್ತಡವಿದೆ ಎಂದು ಹೇಳಿದ್ದಾರೆ. ಇದನ್ನು ಪ್ರಾಮಾಣಿಕವಾಗಿ ಮುಖಂಡರು ಮುಂದೆ ಇಡುತ್ತೇನೆ. ದೇವೇಗೌಡರು 30 ವರ್ಷದಿಂದ ಪಕ್ಷವನ್ನು ಕಟ್ಟಿದ್ದಾರೆ. ನಮ್ಮ ತಂದೆಯವರು 15 ವರ್ಷಗಳಿಂದ ಪಕ್ಷವನ್ನು ಉಳಿಸಿಕೊಂಡು ಬಂದಿದ್ದಾರೆ. ಹೀಗಾಗಿ ಪಕ್ಷದ ಉಳಿವಿಗಾಗಿ ನಾನು ಈ ಚುನಾವಣೆಯಲ್ಲಿ ದುಡಿಯುತ್ತೇನೆ ಎಂದರು.

    hdk

    ರಾಮನಗರ ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ: ಮಂಡ್ಯ ನಮ್ಮ ಪಕ್ಷದ ಹೃದಯ ಇದ್ದಂತೆ. ಅಲ್ಲಿ ಒಮ್ಮೆ ಎಲ್ಲಾ ಕ್ಷೇತ್ರಗಳನ್ನು ಜೆಡಿಎಸ್ ಗೆದ್ದಿತ್ತು. ಕಳೆದ ಚುನಾವಣೆಯಲ್ಲಿ ಕೆ ಆರ್ ಪೇಟೆ ಬಿಟ್ಟು ಎಲ್ಲಾ ಕಡೆ ಸೋತಿದ್ದೇವೆ. ಎಷ್ಟು ನೋವಾಗುತ್ತೆ ಎನ್ನುವುದನ್ನು ಆಲೋಚನೆ ಮಾಡಿ ಎಂದು ವಿಧಾನಸಭೆ ಚುನಾವಣೆಯಲ್ಲಿ ಆದ ಅನುಭವನ್ನು ನೆನದು ನೋವು ತೋಡಿಕೊಂಡರು. ಮುಂಬರುವ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಪ್ರಚಾರ ಮಾಡುತ್ತೇನೆ. ನಾನು ಚುನಾವಣೆಗೆ ನಿಲ್ಲುವುದಿಲ್ಲ. ರಾಮನಗರ ಬಿಟ್ಟು ನಾನು ಎಲ್ಲಿಯೂ ಹೋಗುವುದಿಲ್ಲ. ರಾಮನಗರ ಹೊರತುಪಡಿಸಿ ನನ್ನ ರಾಜಕೀಯ ಜೀವನವನ್ನು ನಾನು ಊಹೆಯೂ ಮಾಡೋದಿಲ್ಲ. ನಮ್ಮ ಮೈತ್ರಿಕೂಟದ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು, ಇದು ನಮ್ಮ ಸಂಕಲ್ಪ ಎಂದು ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

    ಗಿಫ್ಟ್ ಕೂಪನ್ ಹಂಚುತ್ತಾರೆ ಎಂದ ಮಾಜಿ ಶಾಸಕ ಮಂಜುನಾಥ್: ಜೆಡಿಎಸ್ ಬಿಜೆಪಿ ಮೈತ್ರಿ ಆಗಿದೆ. ವರಿಷ್ಠರು ಕೊಟ್ಟ ಸೂಚನೆ ಪಾಲಿಸಿ ನಾವು ಗೆಲುವು ಸಾಧಿಸಬೇಕು. ಮೈತ್ರಿ ಅಭ್ಯರ್ಥಿ ಪರವಾಗಿ ನಾವು ಕೆಲಸ ಮಾಡಬೇಕು. ವಿಧಾನಸಭೆ ಚುನಾವಣೆಯಲ್ಲಿ ಕೊಟ್ಟಂತೆ ಗಿಫ್ಟ್ ಕೂಪನ್ ಗಳನ್ನು ಈ ಬಾರಿಯೂ ಕಾಂಗ್ರೆಸ್ ಹಂಚುವ ಸಾಧ್ಯತೆ ಇದೆ. ನಾವು ಎಚ್ಚರಿಕೆಯಿಂದ ಇರಬೇಕು. ದರ್ಪ ಮತ್ತು ದೌರ್ಜನ್ಯದ ವಿರುದ್ಧ ನಾವು ಚುನಾವಣೆ ನಡೆಸಬೇಕು. ಒಮ್ಮತ, ಒಗ್ಗಟ್ಟಿನಿಂದ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಮಾಗಡಿ ಮಾಜಿ ಶಾಸಕರಾದ ಎ.ಮಂಜುನಾಥ್ ಹೇಳಿದರು.

    IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts