ಮುಂದಿನ ಚುನಾವಣೆಗಳಲ್ಲಿ ಮೈತ್ರಿ ಅಧಿಕಾರಕ್ಕೇರಬೇಕು

bjp
ಕೋಲಾರ ನಗರದ ಜಿಲ್ಲಾ ಬಿಜೆಪಿ ಕಚೇರಿಯಲಿ ತಾಲೂಕು ಕಾರ್ಯಕಾರಿಣಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಮಾತನಾಡಿದರು. ಅರುಣ್ ಕುಮಾರ್, ವಿಜಯ್ ಕುಮಾರ್, ಓಂಶಕ್ತಿ ಚಲಪತಿ ಇದ್ದರು.
Published on

ಕೋಲಾರ: ಮುಂದಿನ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳು ಗೆಲುವು ಸಾಧಿಸಲು ರೂಪರೇಷಗಳನ್ನು ಕೈಗೊಳ್ಳಬೇಕು. ಡಿಸಿಸಿ ಬ್ಯಾಂಕ್ ಸೇರಿ ತಾಪಂ, ಜಿ.ಪಂನಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಬೇಕು ಎಂದು ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ತಾಲೂಕು ಕಾರ್ಯಕಾರಿಣಿ ಮತ್ತು ಬಿಜೆಪಿ ಸದಸ್ಯತ್ವ ಅಭಿಯಾನ ಸಭೆಯಲ್ಲಿ ಮಾತನಾಡಿ, ಜೆಡಿಎಸ್ ಮತ್ತು ಬಿಜೆಪಿ ಹೈಕಮಾಂಡ್ ಮಾರ್ಗದರ್ಶನದಂತೆ ಕಾರ್ಯಕರ್ತರು ಮುಂದೆ ಸಾಗಬೇಕು ಎಂದು ತಿಳಿಸಿದರು.
ವಾರದ ಪ್ರತಿ ಬುಧವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿವಾರು ಸಭೆ ಆಯೋಜಿಸಲಾಗುವುದು. ಆ ಮೂಲಕ ಪಕ್ಷವನ್ನು ಸದೃಢವಾಗಿ ಮಾಡುವ ಕೆಲಸ ಮಾಡೋಣ ಎಂದರು.
ಪ್ರತಿಯೊಬ್ಬರೂ ಬಿಜೆಪಿ ಸದಸ್ಯತ್ವ ಸಂಖ್ಯೆ 8800002024ಗೆ ಮಿಸ್ಡ್ ಕಾಲ್ ನೀಡುವ ಮೂಲಕ ಪಕ್ಷದ ಸದಸ್ಯತ್ವ ಪಡೆದುಕೊಳ್ಳಬಹುದು. ಈ ಬಗ್ಗೆ ವಿವಿಧ ಘಟಕಗಳ ಪಾಽಕಾರಿಗಳು ಗ್ರಾಮಗಳಲ್ಲಿ, ನಗರ, ಪಟ್ಟಣಗಳಲ್ಲಿ ಜನತೆಯಿಂದ ಸದಸ್ಯತ್ವ ಮಾಡಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ, ಜಿಪಂ ಮಾಜಿ ಸದಸ್ಯ ಅರುಣ್ ಕುಮಾರ್, ಕೆಯುಡಿಎ ಮಾಜಿ ಅಧ್ಯಕ್ಷ ವಿಜಯಕುಮಾರ್, ತಾಪಂ ಮಾಜಿ ಅಧ್ಯಕ್ಷ ಸುಲೂರು ಅಂಜಿನಪ್ಪ, ಬಿಜೆಪಿ ಮಾಧ್ಯಮ ಜಿಲ್ಲಾ ಸಂಚಾಲಕ ಎನ್.ಎಸ್ ಪ್ರವೀಣ್ ಗೌಡ, ಮುಖಂಡರಾದ ಬಂಕ್ ಮಂಜು, ಎಂ.ಪಿ. ನಾರಾಯಣಸ್ವಾಮಿ, ಬೆಗ್ಲಿ ಸೂರ್ಯ ಪ್ರಕಾಶ್, ರಾಜೇಶ್ ಸಿಂಗ್, ಸಾ.ಮಾ.ಅನಿಲ್, ಸವಿತಾ ಶ್ರೀನಾಥ್, ನರಸಿಂಹ, ರೂಪೇಶ್, ರಾಮಚಂದ್ರಪ್ಪ, ತಿಮ್ಮರಾಯಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net